17.8 C
Bengaluru
Wednesday, January 22, 2020

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

Latest News

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು ವಿಜಯಪುರ ಜಿಲ್ಲೆ ಸಿಂದಗಿಯ ಸಾಹಿತಿ ಚಂದ್ರಶೇಖರ ವಸ್ತ್ರದ ಅವರ ‘ಅರಿವು ಅಕ್ಷರದಾಚೆ’ ಕೃತಿಗೆ ಲಭಿಸಿದೆ.

ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಡಿ.14ರ ಸಂಜೆ 6ಕ್ಕೆ ಹಮ್ಮಿಕೊಂಡಿರುವ ಸಮಾರಂಭದಲ್ಲಿ ವಸ್ತ್ರದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವೇದಿಕೆ ಅಧ್ಯಕ್ಷ ಎಂ.ಎ. ಸುಬ್ರಹ್ಮಣ್ಯ ಬುಧವಾರ ಮಾಹಿತಿ ನೀಡಿದರು. ಹಿರಿಯ ಕವಿ ದೊಡ್ಡರಂಗೇಗೌಡ ಅತಿಥಿಯಾಗಿ ಪಾಲ್ಗೊಳ್ಳುವರು.

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಅಧ್ಯಕ್ಷತೆ ವಹಿಸುವರು. ಸಾಹಿತಿ, ಚಿಂತಕ ಪ್ರೊ. ಬಸವರಾಜ ಜಗಜಂಪಿ ಕೃತಿ ಕುರಿತು ಅಭಿಪ್ರಾಯ ಹಂಚಿಕೊಳ್ಳುವರು. ಈ ಬಾರಿ ಪ್ರಶಸ್ತಿಗಾಗಿ 125 ಕೃತಿ ಬಂದಿದ್ದವು. ಅಂತಿಮವಾಗಿ 6 ಆಯ್ಕೆ ಮಾಡಲಾಗಿತ್ತು. ಅದರಲ್ಲಿ ‘ಅರಿವು ಅಕ್ಷರದಾಚೆ’ ಕೃತಿ ಪ್ರಶಸ್ತಿಗೆ ಭಾಜನವಾಯಿತು. ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ತಿಳಿಸಿದರು. ಸಾಹಿತಿ ಎಂ.ಬಿ. ರಾಮಾಪುರ ಇದ್ದರು.

ಓದುಗರ ಮೆಚ್ಚುಗೆ ಗಳಿಸಿದ ವಸ್ತ್ರದ: ಚಂದ್ರಶೇಖರ ವಸ್ತ್ರದ ಅವರು ಕಥೆ, ಕಾವ್ಯ, ನಾಟಕ, ಜೀವನ ಚರಿತ್ರೆ, ಲಲಿತ ಪ್ರಬಂಧ, ಚಿಂತನ ಮತ್ತಿತರ ಸಾಹಿತ್ಯ ಪ್ರಕಾರಗಳಲ್ಲಿ ಕೃಷಿಗೈದಿದ್ದಾರೆ. ಅವರು ರಚಿಸಿದ ‘ಮಾನವತಾವಾದಿ ಬಸವಣ್ಣನವರು’ ಕೃತಿ ಇಂಗ್ಲಿಷ್ ಹಾಗೂ ಮರಾಠಿ ಭಾಷೆಗೆ ಅನುವಾದವಾಗಿದ್ದು, 20 ವರ್ಷಗಳಿಂದ ವಚನ ಕಮ್ಮಟ ಪರೀಕ್ಷೆಗೆ ಪಾಠವಾಗಿದೆ.

‘ಅರಿವು ಅಕ್ಷರದಾಚೆ’ ಕೃತಿ ಚೌಪದಿಯ ಬಂಧದಲ್ಲಿದ್ದು, ಓದುಗರ ಮೆಚ್ಚುಗೆ ಗಳಿಸಿದೆ. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ‘ಡಿಸೆಂಬರ್ 1’ ಚಲನಚಿತ್ರಕ್ಕೆ ಸಂಭಾಷಣೆ, ಗೀತೆ ಬರೆದ ಚಂದ್ರಶೇಖರ, ರಂಗಭೂಮಿಯಲ್ಲಿ ನಟ-ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾಗಿ ಹಲವಾರು ಕಾರ್ಯಕ್ರಮ ಆಯೋಜಿಸಿದ್ದಾರೆ.

ರಮಣಶ್ರೀ ಶರಣ ಸಾಹಿತ್ಯ ಉತ್ತೇಜಕ ಪ್ರಶಸ್ತಿ, ಪಂ. ಪುಟ್ಟರಾಜ ಗವಾಯಿ ಸಾಹಿತ್ಯ ಪುರಸ್ಕಾರ, ಸಾಹಿತ್ಯಶ್ರೀ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹುದ್ದೆಯಿಂದ ನಿವೃತ್ತರಾಗಿ, ವಿಶ್ರಾಂತ ಜೀವನ ನಡೆಸುತ್ತಿದ್ದಾರೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...