ಬದಿಯಡ್ಕ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಕಾರಿ ಶ್ರೀ ಡಿ.ವೀರೇಂದ್ರ ಹೆಗ್ಗಡೆಯವರು ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳಿಗೆ ನೀಡಿದ ಧನಸಹಾಯದ ಚೆಕ್ ಹಸ್ತಾಂತರ ಕಾರ್ಯಕ್ರಮ ಶ್ರೀ ಎಡನೀರು ಮಠದಲ್ಲಿ ಬುಧವಾರ ಜರುಗಿತು. ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರು ಆಶೀರ್ವಚನ ನೀಡಿ, ಜೀರ್ಣೋದ್ಧಾರ ನಿಧಿಯು ಅಕ್ಷಯವಾಗಲಿ ಎಂದು ಹರಸಿದರು.
ಜಿಲ್ಲಾ ಯೋಜನಾಧಿಕಾರಿ ಮುಖೇಶ್ ಶ್ರೀಗಳ ಸಮ್ಮುಖದಲ್ಲಿ ಕಾರ್ಮಾರು ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳಿಗೆ ಚೆಕ್ ಹಸ್ತಾಂತರಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಜನಜಾಗೃತಿ ವೇದಿಕೆಯ ಕಾಸರಗೋಡು ತಾಲೂಕು ಅಧ್ಯಕ್ಷ ಅಖಿಲೇಶ್ ನಗುಮುಗಂ, ಬದಿಯಡ್ಕ ವಲಯ ಮೇಲ್ವಿಚಾರಕ ಗೋಪಾಲಕೃಷ್ಣ, ಸೇವಾಸಮಿತಿಯ ಅಧ್ಯಕ್ಷ ಶ್ರೀಕೃಷ್ಣ ಭಟ್ ಪುದುಕೋಳಿ, ಆಡಳಿತ ಮೊಕ್ತೇಸರ ನರಸಿಂಹ ಭಟ್ ಕಾರ್ಮಾರು, ಮಹಿಳಾ ಸಂಘದ ಅಧ್ಯಕ್ಷೆ ಜ್ಯೋತಿ ಕಾರ್ಮಾರು, ಟ್ರಸ್ಟಿಗಳಾದ ರಾಧಾಕೃಷ್ಣ ರೈ ಕಾರ್ಮಾರು, ಗೋಪಾಲ ಭಟ್ ಪಿ.ಎಸ್.ಪಟ್ಟಾಜೆ, ನವೀನ ಭಟ್ ಕುಂಜರಿಕಾನ, ಜಯರಾಮ ಪಾಟಾಳಿ ಪಡುಮಲೆ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಸುಂದರ ಶೆಟ್ಟಿ ಕೊಲ್ಲಂಗಾನ ವಂದಿಸಿದರು.