ಮೂಲ್ಕಿ: ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಬಳಿಕ ದೇವರಿಗೆ ದೃಢಕಲಶಾಭಿಷೇಕ ಬುಧವಾರ ಬೆಳಗ್ಗೆ 8.30ರ ಮಿಥುನ ಲಗ್ನ ಸುಮುಹೂರ್ತದಲ್ಲಿ ನಡೆಯಿತು.
ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಹಯಗ್ರೀವ ಪಡ್ಡಿಲ್ಲಾಯ ವೈದಿಕ ಕಾರ್ಯಕ್ರಮ ನಡೆಸಿದರು. ಕ್ಷೇತ್ರದ ಆಡಳಿತ ಮೊಕ್ತೇಸರ ಎಂ.ಎಚ್.ಅರವಿಂದ ಪೂಂಜ, ಜೀರ್ಣೋದ್ಧಾರ ಸಮಿತಿ ಸುನೀಲ್ ಆಳ್ವ, ವೈ.ಎನ್.ಸಾಲ್ಯಾನ್, ಹರ್ಷರಾಜ ಶೆಟ್ಟಿ, ಮಧು ಆಚಾರ್ಯ, ಡಾ.ಹರಿಶ್ಚಂದ್ರ ಸಾಲ್ಯಾನ್, ಸುರೇಶ್ ರಾವ್, ಜೀವನ್ ಶೆಟ್ಟಿ, ಕೃಷ್ಣ ಶೆಟ್ಟಿ, ಪ್ರವೀಣ್ ಕೋಟ್ಯಾನ್, ಕೃಷ್ಣದೇವಾಡಿಗ, ದಿವಾಕರ ಕೋಟ್ಯಾನ್, ಕಿಶೋರ್ ಹರಿಹರ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶಶೀಂದ್ರ ಸಾಲ್ಯಾನ್, ರವಿಕುಮಾರ್, ರಾಘವೇಂದ್ರ ರಾವ್, ನೂತನ್ ಶೆಟ್ಟಿ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ವಿದ್ವಾನ್ ನಾಗೇಶ್ ಬಪ್ಪನಾಡು, ಪುರಂದರ ಸಾಲ್ಯಾನ್, ರಂಗನಾಥ ಶೆಟ್ಟಿ, ಶಿವರಾಮ್ ಜಿ.ಅಮೀನ್, ಮಹೀಮ್ ಹೆಗ್ಡೆ, ಉದಯ ಕುಮಾರ್ ಶೆಟ್ಟಿ, ಶರತ್ ಕುಬೆವೂರು ಮತ್ತಿತರರು ಉಪಸ್ಥಿತರಿದ್ದರು.