More

  ದೇವರು, ಬುದ್ಧ, ಬಸವ, ಅಂಬೇಡ್ಕರ್​, ಶಿವಾಜಿ ಹೆಸರಲ್ಲಿ ಪ್ರಮಾಣವಚನ: ಸಿದ್ದು ಸಂಪುಟ ಸೇರಿದ 24 ನೂತನ ಸಚಿವರು

  ಬೆಂಗಳೂರು: ಕಳೆದ ಶನಿವಾರ (ಮೇ 20) ಕಂಠೀರವ ಸ್ಟೇಡಿಯಂನಲ್ಲಿ 8 ಮಂದಿ ಸಚಿವರೊಂದಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್​ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಇದಾದ ಒಂದು ವಾರದ ಬಳಿಕ ಸಂಪುಟ ವಿಸ್ತರಣೆಯಾಗಿದ್ದು, ಇಂದು (ಮೇ 27) ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ 24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದರು.

  ಗೌರವಾನ್ವಿತ ರಾಜ್ಯಪಾಲರಾದ ಥಾವರ್​ ಚಂದ್​ ಗೆಹ್ಲೋಟ್​ ಅವರು ನೂತನ ಸಚಿವರಿಗೆ ಪ್ರತಿಜ್ಞಾವಿಧಿಯನ್ನು ಬೋದಿಸಿದರು.

  ಎಚ್‌.ಕೆ ಪಾಟೀಲ್‌, ಎನ್‌ ಚಲುವನಾರಾಯಣ ಸ್ವಾಮಿ, ಕೆ. ವೆಂಕಟೇಶ್‌, ಈಶ್ವರ್‌ ಖಂಡ್ರೆ, ಶರಣಬಸಪ್ಪ ದರ್ಶನಾಪುರ, ತಿಮ್ಮಾಪೂರ್‌ ರಾಮಪ್ಪ ಬಾಲಪ್ಪ, ಎಸ್‌.ಎಸ್‌. ಮಲ್ಲಿಕಾರ್ಜುನ್‌, ಶಿವರಾಜ ತಂಗಡಗಿ, ಶರಣ ಪ್ರಕಾಶ್​ ಪಾಟೀಲ್​, ಮಂಕಾಳ ವೈದ್ಯ, ಡಿ. ಸುಧಾಕರ್‌, ಸಂತೋಷ್‌ ಲಾಡ್, ಎನ್‌.ಎಸ್‌. ಬೋಸೆರಾಜು, ಬೈರತಿ ಸುರೇಶ್, ಮಧು ಬಂಗಾರಪ್ಪ, ಎಂ.ಸಿ. ಸುಧಾಕರ್ ಮತ್ತು ಬಿ.ನಾಗೇಂದ್ರ​​ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

  ಇದನ್ನೂ ಓದಿ: ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿರುದ್ಧ ಪ್ರಕರಣ ಚುರುಕು: ಮಂಡ್ಯ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆ

  ಡಾ.ಎಚ್‌. ಸಿ. ಮಹಾದೇವಪ್ಪ ಅವರು ಸತ್ಯ ನಿಷ್ಠೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಕೆ.ಎನ್​. ರಾಜಣ್ಣ ಅವರು ಬುದ್ಧ, ಬಸವ, ಅಂಬೇಡ್ಕರ್​ ಹಾಗೂ ವಾಲ್ಮಿಕಿ ಮಹರ್ಷಿ ಹೆಸರಿನಲ್ಲಿ ಪ್ರಮಾಣ ಮಾಡಿದರು. ಶಿವಾನಂದ ಪಾಟೀಲ್‌ ಅವರು ಬಸವಣ್ಣನ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಬಸವಣ್ಣ, ಶಿವಾಜಿ ಹಾಗೂ ಅಂಬೇಡ್ಕರ್​ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಹೀಂ ಖಾನ್‌ ಅವರು ಅಲ್ಲಾ ಹೆಸರಿನಲ್ಲಿ ಇಂಗ್ಲಿಷ್​ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಕೃಷ್ಣ ಭೈರೇಗೌಡ ಹಾಗೂ ದಿನೇಶ್‌ ಗುಂಡೂರಾವ್‌ ಅವರು ಯಾರ ಹೆಸರನ್ನೂ ಉಲ್ಲೇಖಸದೇ ಶ್ರದ್ಧಾಪೂರ್ವಕವಾಗಿ ದೃಢೀಕರಣ ಮಾಡುತ್ತೇನೆ ಎನ್ನುವ ಮೂಲಕ ಪ್ರಮಾಣ ವಚನ ಸ್ವೀಕರಿಸಿದರು.

  ಕಳೆದ ವಾರ ಎಂಟು ಸಚಿವರಿಂದ ಪ್ರಮಾಣ ವಚನ

  ಕಳೆದವಾರ ಅಂದರೆ ಮೇ 20ರ ಶನಿವಾರ ಎಂ. ಬಿ. ಪಾಟೀಲ್, ಡಾ. ಜಿ. ಪರಮೇಶ್ವರ್, ಪ್ರಿಯಾಂಕ ಖರ್ಗೆ, ಕೆ.ಎಚ್. ಮುನಿಯಪ್ಪ, ಕೆ. ಜೆ. ಜಾರ್ಜ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್ ಹಾಗೂ ರಾಮಲಿಂಗಾ ರೆಡ್ಡಿ ಅವರು ಸಿದ್ದರಾಮಯ್ಯ ಮತ್ತು ಡಿಕೆಶಿ ಜತೆ ಪ್ರಮಾಣ ವಚನ ಸ್ವೀಕಾರ ಮಾಡಿದರು. ಕಳೆದ ವಾರ ಎಂಟು ಮಂದಿ ಇದೀಗ 24 ಮಂದಿ ಸೇರಿ ಒಟ್ಟು 32 ಸಚಿವರು ಸಿದ್ದರಾಮಯ್ಯ ಮತ್ತು ಡಿಕೆಶಿ ಸಂಪುಟವನ್ನು ಸೇರಿದಂತಾಗಿದೆ. ಅಲ್ಲಿಗೆ ಸಿದ್ದು ಸಂಪುಟ ಭರ್ತಿಯಾಗಿದೆ.

  ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಪಂಚಮಸಾಲಿ ಸಮಾಜ ಆಕ್ರೋಶ

  ಮಂತ್ರಿ ಸ್ಥಾನ ದೊರೆತ ಬೆನ್ನಲ್ಲೇ ಅಜ್ಜಿಯೂ ಆದ ಲಕ್ಷ್ಮೀ ಹೆಬ್ಬಾಳ್ಕರ್

  ಸಚಿವ ಸ್ಥಾನ ನೀಡಿದ್ದರೆ ಚೆನ್ನಾಗಿತ್ತು: ಶಾಸಕ ಪುಟ್ಟರಂಗಶೆಟ್ಟಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts