ಅಂಗನವಾಡಿ: ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

job
Published on


ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಯಲಹಂಕ, ಬೆಂಗಳೂರು ಉತ್ತರ ತಾಲ್ಲೂಕು ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 96 ಅಂಗನವಾಡಿ ಕಾರ್ಯಕರ್ತೆ ಮತ್ತು 204 ಸಹಾಯಕಿಯ ಗೌರವಧನ ಹುದ್ದೆಗಳಿಗೆ ಭೌತಿಕವಾಗಿ 05.07.2013ರಿಂದ 05.08.2023 ರವರೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರದ ಮಾರ್ಗಸೂಚಿ ಮತ್ತು ಆಯ್ಕೆಯ ಮಾನದಂಡಗಳು ಆನ್ವಯಿಸುತ್ತದೆ.

ವಿದ್ಯಾರ್ಹತೆ:
ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಸಹಾಯಕಿಯ ಹುದ್ದೆಗೆ ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಬೇತಿಯಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ಕಡ್ಡಾಯ ದಾಖಲೆಗಳು
1) ಅರ್ಜಿ ನಮೂನೆ (ಅರ್ಜಿಯನ್ನು ಕಚೇರಿಯಲ್ಲಿ ಪಡೆಯುವುದು)
2) 2 ಛಾಯಾಚಿತ್ರ
3) ವಾಸಸ್ಥಳ ದೃಢೀಕರಣ ಪತ್ರ
4) ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಹೆಚ್ಚಿನ ಮಾಹಿತಿಗಾಗಿ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಮಿನಿ ವಿಧಾನಸೌಧ (ನೆಲಮಹಡಿ), ಯಲಹಂಕ, ಬೆಂಗಳೂರು ಉತ್ತರ ತಾಲ್ಲೂಕು, ಬೆಂಗಳೂರು-560064, ದೂರವಾಣಿ ಸಂಖ್ಯೆ 080-28462513 ಇಲ್ಲಿ ಸಂಪರ್ಕಿಸಬಹುದು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net