ಡಿಕೆಶಿ ವಿರುದ್ಧದ ಸಿಬಿಐ ಕೇಸ್ ಹಿಂಪಡೆಯುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

Dk Shivakumar

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ವಿರುದ್ಧ ಕೇಂದ್ರಿಯಾ ತನಿಖಾ ಸಂಸ್ಥೆ(CBI) ನಡೆಸುತ್ತಿರುವ ತನಿಖೆಯನ್ನು ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯ ಕಾಂಗ್ರೆಸ್​ ಸರ್ಕಾರ ಅಸ್ತು ಎಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ರಾಜ್ಯ ಗೃಹ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಇದಲ್ಲದೆ ಸಿಬಿಐ ತನಿಖೆಯನ್ನು ಹಿಂಪಡೆಯಲು ಕೋರಿದಲ್ಲದೆ ತನಿಖೆಯನ್ನು ರಾಜ್ಯ ಪೊಲೀಸ್​ ಇಲಾಖೆ ಅಥವಾ ಲೋಕಾಯುಕ್ತಗೆ ಒಪ್ಪಿಸುವಂತೆ ಪ್ರಸ್ತಾವನೆಯಲ್ಲಿ ಕೋರಲಾಗಿದೆ ಎಂದು ಉನ್ನತ ಸುದ್ದಿ ಮೂಲಗಳು ತಿಳಿಸಿವೆ.

2019ರಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಅಕ್ರಮ ಆಸ್ತಿ ಗಳಿಕೆ ಸಂಬಂಧ ಡಿ.ಕೆ. ಶಿವಕುಮಾರ್​ ವಿರುದ್ಧ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿತ್ತು. ಈಗಾಗಲೇ ಶೇ.90 ರಷ್ಟು ತನಿಖೆಯನ್ನು ಪೂರ್ಣಗೊಳಿಸಲಾಗಿದ್ದು, ರಾಜ್ಯದಲ್ಲಿನ ತನಿಖಾ ಸಂಸ್ಥೆಗಳಿಗೆ ಪ್ರಕರಣವನ್ನು ವಹಿಸಲು ಸಿದ್ದತೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

Share This Article

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…