ಸಿನಿಮಾ

Karnataka Assembly Election 2023; ಸರತಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿ ಕುಸಿದು ಬಿದ್ದು ಅಸ್ವಸ್ಥ!

ಕಲಬುರಗಿ: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ವೋಟ್​​ ಮಾಡುತ್ತಿದ್ದಾರೆ. ಮತದಾರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಮತ ಹಾಕಲು ನಿಂತಿದ್ದ ವ್ಯಕ್ತಿಯೊಬ್ಬರು ಏಕಾಎಕಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ.

ಇದನ್ನೂ ಓದಿ:ನಾಲ್ಕು ತಿಂಗಳಿನಿಂದ ಹಾಸಿಗೆಯಲ್ಲೇ ಮಲಗಿದ್ದ ರೋಗಿ; ಆಂಬ್ಯುಲೆನ್ಸ್​​ನಲ್ಲಿ ಬಂದು ಮತ ಚಲಾವಣೆ 

ಹೃದಯದ ಬಡಿತ ಕಡಿಮೆಯಾಗಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಸ್ಥಳದಲ್ಲೇ ಸರದಿ ಸಾಲಿನಲ್ಲಿ ನಿಂತಿದ್ದ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಈ ಘಟನೆ ಕಲಬುರಗಿಯ ಸಂತೋಷ್ ಕಾಲನಿಯ ಮತಗಟ್ಟೆಯಲ್ಲಿ ನಡೆದಿದೆ.

ಇದನ್ನೂ ಓದಿ: ನವವಿವಾಹಿತನ ಮತಾಭಿಮಾನ: ಧರ್ಮಸ್ಥಳದಲ್ಲಿ ಮದುವೆಯಾಗಿ ಹಾಸನಕ್ಕೆ ಬಂದು ಮತದಾನ
ಡಾ.ರುದ್ರವಾಡಿ ಅವರು ಪ್ರಥಮ ಚಿಕಿತ್ಸೆ ನೀಡಿ ನಂತರ ಆ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸಕಾಲಕ್ಕೆ ವೈದ್ಯರ ಸಹಾಯದಿಂದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮತದಾನ ಕೇಂದ್ರದ ಆವರಣದಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ

Latest Posts

ಲೈಫ್‌ಸ್ಟೈಲ್