More

    ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್​​ಗೆ ಹೀನಾಯ ಸೋಲು

    ಚಿಕ್ಕಬಳ್ಳಾಪುರ: ಕರ್ನಾಟಕ ವಿಧಾನಸಭಾ ಚುನಾವಣೆ ಮತ ಏಣಿಕೆ ನಡೆಯುತ್ತಿದೆ. ಕಾಂಗ್ರೆಸ್​, ಜೆಡಿಎಸ್​, ಬಿಜೆಪಿಯ ಹಲವು ಅಭ್ಯರ್ಥಿಗಳು ಗೆಲುವಿನ ನಗೆಬೀರಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್​​ಗೆ ಹೀನಾಯಸೋಲು ಅನುಭವಿಸಿದ್ದಾರೆ.

    ಚಿಕ್ಕಬಳ್ಳಾಪುರ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಪ್ರದೀಪ್‌ ಈಶ್ವರ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್‌ಗೆ ಭಾರೀ ಮುಖಭಂಗವಾಗಿದೆ. ಕಾಂಗ್ರೆಸ್​​ನ ಪ್ರದೀಪ್​ ಈಶ್ವರ್​​ ಜಯಭೇರಿ ಭಾರಿಸಿದ್ದಾರೆ.

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಪ್ರದೀಪ್‌ ಈಶ್ವರ್‌ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಗೆಲುವು ಬಹುತೇಕ ಖಚಿತ ಎನ್ನುವ ಮಾತು ಕೇಳಿ ಬಂದಿತ್ತು.

    ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆಗೆ ಇಳಿದಿದ್ದ ಪ್ರದೀಪ್ ಈಶ್ವರ್‌ಗೆ ಗೆಲುವಾಗಿದೆ. 57,878 ಮತಗಳನ್ನು ಗಳಿಸಿದ ಸುಧಾಕರ್ ಅವರನ್ನು ಪ್ರದೀಪ್ ಈಶ್ವರ್ 69,008 ಮತಗಳನ್ನು ಗಳಿಸುವ ಮೂಲಕ ಸೋಲಿಸಿದ್ದಾರೆ.

    ಆಂಧ್ರ ಗಡಿಗೆ ಹೊಂದಿಕೊಂಡಂತಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆ ವೇಳೆ, ಹಣ, ಜಾತಿ, ಅಭಿವೃದ್ಧಿ, ಭ್ರಷ್ಟಾಚಾರ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬಂದಿದ್ದವು. ಆರಂಭದಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಚಿಕ್ಕಬಳ್ಳಾಪುರದಲ್ಲಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಡಾ. ಕೆ. ಸುಧಾಕರ್ ಜಯಭೇರಿ ಬಾರಿಸಿದ್ದರು.

    2018ರ ಫಲಿತಾಂಶ ಏನಿತ್ತು?:
    2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್​ 80 ಮತ್ತು ಜೆಡಿಎಸ್​ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts