ವಿಧಾನಸಭೆ ಚುನಾವಣೆ ದಿನಾಂಕ ಮಾರ್ಚ್ 21 ರಂದು ಘೋಷಣೆ ಸಾಧ್ಯತೆ

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಇದರ ಬೆನ್ನಲ್ಲೇ ಮಾರ್ಚ್​​ 21ಕ್ಕೆ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಕೇಂದ್ರ ಚುನಾವಣಾ ಆಯೋಗ ಬುಧವಾರ ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆ ಇದೆ ಎಂದು ದಿಗ್ವಿಜಯ ನ್ಯೂಸ್​ಗೆ ಚುನಾವಣಾ ಆಯೋಗದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಆಯೋಗ ಚಿಂತಿಸುತ್ತಿದೆ ಎಂದೂ ತಿಳಿದು ಬಂದಿದೆ.

ಕೇಂದ್ರ ಚುನಾವಣಾ ಆಯೋಗ ಚುನಾವಣೆಗಾಗಿ ಸಕಲ ಸಿದ್ಧತೆ ನಡೆಸುತ್ತಿದೆ. ಜತೆಗೆ ರಾಜಕೀಯ ನಾಯಕರು ಮತ್ತು ರಾಜಕೀಯ ಪಕ್ಷಗಳೂ ಚುನಾವಣೆಗಾಗಿ ಭರ್ಜರಿ ತಯಾರಿ ನಡೆಸಿವೆ.

Leave a Reply

Your email address will not be published. Required fields are marked *