More

    ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ಆರ್‌.ಶಂಕರ್ ರಾಜೀನಾಮೆ ಘೋಷಣೆ

    ಬೆಂಗಳೂರು: ರಾಣೆಬೆನ್ನೂರು ಬಿಜೆಪಿ ಟಿಕೆಟ್ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಮಾಜಿ ಸಚಿವ ಆರ್.ಶಂಕರ್ ಅವರು ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಆರ್. ಶಂಕರ್ ರಾಣೆಬೆನ್ನೂರು ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ತೀವ್ರ ಅಸಮಾಧಾನಗೊಂಡಿದ್ದಾರೆ. ಶಾಸಕ ಅರುಣ್ ಕುಮಾರ್ ಗೆ ಬಿಜೆಪಿ ಟಿಕೆಟ್ ಕೊಟ್ಟ ಹಿನ್ನೆಲೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ.

    ಇದನ್ನೂ ಓದಿ: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಎಸ್.ಅಂಗಾರ
    2018ರಲ್ಲಿ ಕೆಪಿಜೆಪಿಯಿಂದ ಗೆದ್ದು ಶಾಸಕರಾಗಿದ್ದ ಆರ್‌.ಶಂಕರ್‌ ಅವರು ನಂತರ ಕಾಂಗ್ರೆಸ್ ಪಕ್ಷ ಸೇರಿ ಅರಣ್ಯ ಸಚಿವರಾದರು. ನಂತರ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಬೆಂಬಲ ಸೂಚಿಸಿ, ಬಿಜೆಪಿ ಸರ್ಕಾರ ರಚನೆಗೆ ಕಾರಣರಾದರು.

    2019ರ ಉಪಚುನಾವಣೆಯಲ್ಲಿ ಆರ್‌.ಶಂಕರ್‌ ಬದಲಾಗಿ ಸ್ಥಳೀಯ ಅಭ್ಯರ್ಥಿ ಅರುಣಕುಮಾರ ಪೂಜಾರ ಅವರಿಗೆ ಬಿಜೆಪಿ ಟಿಕೆಟ್‌ ನೀಡಿ, ಶಂಕರ್‌ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಲಾಗಿತ್ತು. ಈ ಬಾರಿ ಅವರು ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದರು. ಬಿಜೆಪಿ ಟಿಕೆಟ್‌ ಸಿಗದ ಕಾರಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    VIDEO| ಟ್ರಾಪಿಕ್​ ಸಮಸ್ಯೆ ತಪ್ಪಿಸಲು ಮೆಟ್ರೋದಲ್ಲಿ ಪ್ರಯಾಣಿಸಿದ ನಟಿ ಹೇಮಾ ಮಾಲಿನಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts