More

    Karnataka Assembly Election; ಮತದಾರರ ಯಾವ ಬೆರಳಿಗೆ ಶಾಯಿ? ಇಲ್ಲಿದೆ ವಿವರ..

    ಬೆಂಗಳೂರು: ರಾಜ್ಯದಲ್ಲಿ ಚುನಾವಣೆಯ ಭರಾಟೆ ಶುರುವಾಗಿದೆ. ರಾಜಕೀಯ ಪಕ್ಷಗಳು ಸೋಲುಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ರ ಮತದಾನ ಮೇ 10 ರಂದು ನಿಗದಿಯಾಗಿದ್ದು, ರಾಜ್ಯದಲ್ಲಿ 5,30,85,566 ಜನರು ಈ ಬಾರಿ ಮತದಾನ ಮಾಡಲು ಅರ್ಹರಾಗಿದ್ದಾರೆ.

    ಮೇ 10ರ ಬುಧವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ವ್ಯವಸ್ಥೆ ಮಾಡಲಾಗಿದೆ. ಮತದಾನ ಚಲಾಯಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಬಾರಿ ಚುನಾವಣೆಯಲ್ಲಿ 2,66,82,156 ಪುರುಷ, 2,63,98,483 ಮಹಿಳೆ, 4,927 ಇತರ ಮತದಾರರು ಸೇರಿದಂತೆ ಒಟ್ಟು 5,30,85,566 ಮತದಾರರು ಈ ಬಾರಿ ಹಕ್ಕು ಚಲಾವಣೆ ಮಾಡಲು ಅವಕಾಶವಿದೆ.

    ಸಾಂವಿಧಾನಿಕವಾಗಿ ಬಂದಿರುವ ಮತದಾನದ ಹಕ್ಕನ್ನು ಚಲಾಯಿಸಿದ್ದೇವೆಂಬುದನ್ನು ಸೂಚಿಸುವ ಹಾಗೂ ಹಕ್ಕನ್ನು ಚಲಾಯಿಸಿದ್ದಾನೆ ಎಂದು ಖಾತರಿಪಡಿಸುವ ಸಂಕೇತವಾಗಿ ಮತದಾರರ ಎಡಗೈನ ತೋರು ಬೆರಳಿಗೆ ಸುಲಭವಾಗಿ ಅಳಿಸಲಾಗದಂತಹ ಒಂದು ಶಾಯಿಯ ಗುರುತನ್ನು ಹಾಕಿರುತ್ತಾರೆ. ಈ ಶಾಯಿಯ ಗುರುತು ಆ ವ್ಯಕ್ತಿ ಈಗಾಗಲೇ ತನ್ನ ಮತದಾನದ ಹಕ್ಕನ್ನು ಚಲಾಯಿಸಿದ್ದಾನೆ ಎಂಬುದನ್ನು ಖಾತರಿ ಪಡಿಸುತ್ತದೆ.

    ಇದನ್ನೂ ಓದಿ: ಸೇಬು ಆಮದು ನಿಷೇಧಿಸಿದ ಕೇಂದ್ರ ಸರ್ಕಾರ; ಕಾರಣವೇನು ಗೊತ್ತಾ..?

    ಎಡಗೈ ತೋರು ಬೆರಳಿಗೆ ಶಾಯಿ:
    ರಾಜ್ಯ ಚುನಾವಣಾ ಆಯೋಗ ಮತದಾನಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನ ಮಾಡಿದವರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯ ಗುರುತು ಹಾಕಲಾಗುತ್ತದೆ.

    ಚುನಾವಣೆಯಲ್ಲಿ ಬಳಸುವ ಶಾಯಿ ಇತಿಹಾಸ:
    ಚುನಾವಣೆ ಎಲ್ಲಿಯೇ ನಡೆಯಲಿ ಆದರೆ ಮತದಾರರ ಬೆರಳಿಗೆ ಹಚ್ಚುವ ಅಳಿಸಲಾಗದ ಶಾಯಿ ಮಾತ್ರ ಮೈಸೂರಿಂದಲೇ ಸರಬರಾಜಾಗುತ್ತದೆ. ಚುನಾವಣೆಗೆ ಅಳಿಸಲಾಗದ ಶಾಯಿ ಮೈಸೂರು ಮಹಾರಾಜರ ಕಾಲದಲ್ಲಿ ಸ್ಥಾಪನೆಗೊಂಡ ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆಯಲ್ಲಿ ತಯಾರಾಗುತ್ತದೆ.

    ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ (ಮೈಲ್ಯಾಕ್)ಯನ್ನು ನಾಲ್ವಡಿ ಕೃಷ್ಣರಾಜ ಒಡೆಯರು ಸ್ಥಾಪಿಸಿದ್ದಾರೆ. 1937ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರು ಈ ಕಾರ್ಖಾನೆಯನ್ನು ಸ್ಥಾಪಿಸಿದಾಗ ಇಲ್ಲಿ ಕೇವಲ ಬಣ್ಣಗಳಷ್ಟೆ ತಯಾರಾಗುತ್ತಿತ್ತು. ಬಳಿಕ ಸ್ವಾತಂತ್ರ್ಯ ನಂತರ ಇದು ರಾಜ್ಯ ಸರ್ಕಾರದ ಅಧೀನಕ್ಕೆ ಒಳಪಟ್ಟಿತು.

    ಸ್ವಾತಂತ್ರ್ಯ ನಂತರದ ಕಾಲಾವಧಿ ಅಂದರೆ ಸುಮಾರು ಐದು ದಶಕಗಳ ಹಿಂದೆ ಮತದಾನದಲ್ಲಿ ನಡೆಯುವ ಅಕ್ರಮ ತಡೆಯಲು ಚುನಾವಣಾ ಆಯೋಗ ಮತದಾರನ ಬೆರಳಿಗೆ ಕಪ್ಪು ಶಾಯಿ (ಮಸಿ) ಬಳಸುವ ವಿಧಾನವನ್ನು ಜಾರಿಗೆ ತಂದಿತ್ತು. ಅಲ್ಲಿಂದ ಇಲ್ಲಿಯವರೆಗೂ ದೇಶದ ಯಾವುದೇ ರಾಜ್ಯದಲ್ಲಿ ಚುನಾವಣೆ ನಡೆದರೂ ಮೈಸೂರಿನಿಂದಲೇ ಶಾಯಿಯನ್ನು ಸರಬರಾಜು ಮಾಡಲಾಗುತ್ತಿರುವುದು ವಿಶೇಷವಾಗಿದೆ.

    ಮತದಾರರ ಬೆರಳುಗಳಿಗೆ ಹಚ್ಚಲು ಶಾಯಿಯನ್ನು ತಯಾರಿಸಿ ಡಬ್ಬದಲ್ಲಿ ಶೇಖರಿಸಿಡಲಾಗುತ್ತಿತ್ತು. ಈಗ ಇನ್ನಷ್ಟು ಅಭಿವೃದ್ಧಿಯಾಗಿದ್ದು, ಶಾಯಿ ಬಾಟಲಿ ಮಾತ್ರವಲ್ಲದೆ ಶಾಯಿ ತುಂಬಿದ ಮಾರ್ಕರ್ ಪೆನ್ನುಗಳನ್ನು ತಯಾರಿಸಲಾಗುತ್ತಿದೆ.

    ವಿಶ್ವದ ಅತ್ಯಂತ ದುಬಾರಿ ಮಾವಿನಹಣ್ಣು; ಒಂದು ಹಣ್ಣಿನ ಬೆಲೆ ಎಷ್ಟು ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts