ಗೆದ್ದು ಬೀಗಿದ ತಂದೆ-ಮಗ; ಕಾಂಗ್ರೆಸ್​​ಗೆ ಆಶೀರ್ವಾದ ಮಾಡಿದ ದಾವಣಗೆರೆ ಜನತೆ

Shamanur Shivashankarappa
Published on

ದಾವಣಗೆರೆ: ರಾಜ್ಯ ವಿಧಾನಸಭೆ ಫಲಿತಾಂಶ ಹೊರ ಬಿದ್ದಿದ್ದು, ದಾವಣಗೆರೆ ದಕ್ಷಿಣ ಮತ್ತು ಉತ್ತರದಲ್ಲಿ ಅಪ್ಪ- ಮಗ ಇಬ್ಬರು ಜಯ ಗಳಿಸಿದ್ದಾರೆ.

ದಾವಣಗೆರೆ ಉತ್ತರ ಹಾಗೂ ದಕ್ಷಿಣದಲ್ಲಿ ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ಅವರ ತಂದೆ ಶಾಮನೂರು ಶಿವಶಂಕರಪ್ಪನವರು ಗೆದ್ದು ಗೆಲುವಿನ ನಗೆಯನ್ನು ಬೀರಿದ್ದಾರೆ.

ದಾವಣಗೆರೆ ಉತ್ತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಎಸ್‌.ಮಲ್ಲಿಕಾರ್ಜುನ್‌ 78,345 ಮತಗಳನ್ನು ಪಡೆಯುವ ಗೆಲುವು ಸಾಧಿಸಿದ್ದರೆ, ಮತ್ತೊಂದೆಡೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ 83,839 ಅವರು ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ಗಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net