More

    ತುಂತುರು ನೀರಾವರಿ ಹಗರಣದಲ್ಲಿ ಸಿಎಂ ಬೊಮ್ಮಾಯಿ 1,500 ಕೋಟಿ ರೂ. ಕೊಳ್ಳೆ ಹೊಡೆದಿದ್ದಾರೆ: ನೆಹರು ಓಲೇಕಾರ

    ಹಾವೇರಿ: ತುಂತುರು ನೀರಾವರಿ ಹಗರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ 1,500 ಕೋಟಿ ರೂ. ಕೊಳ್ಳೆ ಹೊಡೆದಿದ್ದಾರೆ ಎಂದು ಶಾಸಕ ನೆಹರು ಓಲೇಕಾರ ಗಂಭೀರ ಆರೋಪ ಮಾಡಿದ್ದಾರೆ.

    ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಶಾಸಕ ನೆಹರು ಓಲೇಕಾರ ಹಾಗೂ ಬೆಂಬಲಿಗರು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ನೆಹರು ಓಲೇಕಾರ, ಸಿಎಂ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದರು.ತುಂತುರು ನೀರಾವರಿ ಹಗರಣದಲ್ಲಿ ಸಿಎಂ ಬೊಮ್ಮಾಯಿ 1,500 ಕೋಟಿ ರೂ. ಕೊಳ್ಳೆ ಹೊಡೆದಿದ್ದಾರೆ: ನೆಹರು ಓಲೇಕಾರ

    ಇದನ್ನೂ ಓದಿ:  ವಿಧಾನ ಪರಿಷತ್‌ ಸ್ಥಾನಕ್ಕೆ ಆರ್‌.ಶಂಕರ್ ರಾಜೀನಾಮೆ ಘೋಷಣೆ

    ನನ್ನ ಬೆಳವಣಿಗೆ ಸಹಿಸದೇ ನನಗೆ ಟಿಕೆಟ್ ನೀಡಿಲ್ಲ. ಬೊಮ್ಮಾಯಿ ಧಮ್, ತಾಕತ್ ಎಷ್ಟಿದೆ ತೋರಿಸಲಿ. ನಾವು ಕೂಡ ನಮ್ಮ ತಾಕತ್ ತೋರಿಸುತ್ತೇವೆ ಎಂದು ಶಾಸಕ ನೆಹರು ಓಲೇಕಾರ್ ಹೇಳಿದ್ದಾರೆ.

    ಇದನ್ನೂ ಓದಿ: ಪಿಎಂ ಆವಾಸ್ ಯೋಜನೆ ʼನನ್ನ ಜೀವನವನ್ನೇ ಬದಲಾಯಿಸ್ತು : ಮೋದಿಗೆ ಪತ್ರ ಬರೆದ ಮಹಿಳೆ!

    ತುಂತುರು ನೀರಾವರಿ ಹಗರಣದಲ್ಲಿ ಸಿಎಂ ಬೊಮ್ಮಾಯಿ 1,500 ಕೋಟಿ ಕೊಳ್ಳೆ ಹೊಡೆದಿದ್ದಾರೆ, ರೈತರಿಗೆ ಒಂದು ಪೈಪ್ ಕೂಡ ನೀಡಿಲ್ಲ. ತುಂತುರು ನೀರಾವರಿ ಯೋಜನೆ ಶಿಗ್ಗಾಂವಿ ಕ್ಷೇತ್ರದ ಜನರಿಗೆ ಮಾತ್ರ ಸೀಮಿತ ಮಾಡಿದ್ದಾರೆ. ಇತರ ಜಿಲ್ಲೆಯ ರೈತರಿಗೆ ಯೋಜನೆಯಿಂದ ಯಾವುದೇ ಪ್ರಯೋಜನೆ ಆಗಿಲ್ಲ ಎಂದು ಶಾಸಕ ನೆಹರು ಓಲೇಕಾರ ಅಸಮಾಧಾನ ಹೊರ ಹಾಕಿದರು.

    ಪ್ರತಿಭಟನೆ ತೀವ್ರ: ಶಾಸಕ ನೆಹರು ಓಲೇಕಾರ ಅವರಿಗೆ ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿಸಿ ಗವಿಸಿದ್ದಪ್ಪ ದ್ಯಾಮಣ್ಣವರಗೆ ಟಿಕೆಟ್ ನೀಡಿದ್ದನ್ನು ಖಂಡಿಸಿ, ಅವರ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

    ಕೈ ತಪ್ಪಿದ ಬಿಜೆಪಿ ಟಿಕೆಟ್; ಬೆಟ್ಟಸ್ವಾಮಿಗೆ ಲಘು ಹೃದಯಾಘಾತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts