Thursday, 15th November 2018  

Vijayavani

ಸಚಿವ ಸ್ಥಾನಕ್ಕಾಗಿ ಬಳ್ಳಾರಿ ಶಾಸಕರ ಲಾಬಿ - ತುಕಾರಾಂ ಸೇರಿದಂತೆ ಐವರ ಪೈಪೋಟಿ        RSS ಬೈಠಕ್​​ನಲ್ಲಿ ರಾಮಮಂದಿರ ಪ್ರತಿಧ್ವನಿ-ಶಬರಿಮಲೆ ಹೋರಾಟದಿಂದ ಹಿಂದೆ ಸರಿಯಲ್ಲ-ಷಾ ಸಮ್ಮುಖದಲ್ಲಿ ನಿರ್ಧಾರ        KRS ಬಳಿ 125 ಅಡಿ ಎತ್ತರದ ಕಾವೇರಿ ಮಾತೆ ಸ್ಟ್ಯಾಚ್ಯೂ ನಿರ್ಧಾರ-ಡಿಕೆಶಿ ನೇತೃತ್ವದ ಸಮಿತಿಯ ತೀರ್ಮಾನ        ರವಿ ಕೊಲೆ ಹಿಂದೆ ಸೈಲೆಂಟ್ ಸುನಿಲನ ನೆರಳು - ತುಮಕೂರು ಡಾಬಾದಲ್ಲೇ ನಡೆದಿತ್ತು ಹಂತಕ ಮೀಟಿಂಗ್        ತಮಿಳುನಾಡಿನಲ್ಲಿ ಗಜ ಆರ್ಭಟ-ಸಮುದ್ರದಲ್ಲಿ ಅಲೆಗಳ ಅಬ್ಬರ-ಬೆಂಗಳೂರಿನ ಹಲವೆಡೆ ಮಳೆ ಸಾಧ್ಯತೆ        ದೀಪ್​-ವೀರ್​​ ಕಲ್ಯಾಣೋತ್ಸವ-ನಿನ್ನೆ ಕೊಂಕಣಿ, ಇಂದು ಸಿಂಧಿ ಸ್ಟೈಲ್​ ಕಲ್ಯಾಣ-ಇಟಲಿಯಲ್ಲಿ ಅದ್ದೂರಿ ವಿವಾಹ       
Breaking News

ಬಳ್ಳಾರಿ ಪ್ರವೇಶಕ್ಕೆ ನೋ ಎಂದ ಸುಪ್ರೀಂ: ರೆಡ್ಡಿಗೆ ಭಾರಿ ಮುಖಭಂಗ

Friday, 04.05.2018, 4:03 PM       No Comments

ನವದೆಹಲಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಹೋದರ ಜಿ. ಸೋಮಶೇಖರ ರೆಡ್ಡಿ ಪರ ಬಳ್ಳಾರಿಯಲ್ಲಿ ಪ್ರಚಾರ ಮಾಡಲು ಅನುಮತಿ ಕೋರಿ ಜಿ. ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ಶುಕ್ರವಾರ ವಜಾಗೊಳಿಸಿದೆ.

ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಯಾವುದೇ ಅರ್ಹತೆ ಇಲ್ಲ ಎಂದು ಹೇಳಿ ರೆಡ್ಡಿ ಮನವಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದ್ದು, ರೆಡ್ಡಿಗೆ ಭಾರಿ ಮುಖಭಂಗವಾಗಿದೆ.

ಬಹುಕೋಟಿ ಗಣಿ ಅಕ್ರಮ ಹಗರಣದಲ್ಲಿ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರಗಿರುವ ಜನಾರ್ದನ ರೆಡ್ಡಿಯ ಬಳ್ಳಾರಿ ಪ್ರವೇಶಕ್ಕೆ ನ್ಯಾಯಾಲಯ ನಿರ್ಬಂಧ ಹೇರಿದೆ.

ಈ ಬಾರಿಯ ಬಳ್ಳಾರಿಯ ರಣರಂಗದಲ್ಲಿ ರೆಡ್ಡಿ ಸಹೋದರ ಸೋಮಶೇಖರ ರೆಡ್ಡಿ ಸ್ಪರ್ಧಿಸುತ್ತಿದ್ದರೆ, ಹಿರಿಯ ಸಹೋದರ ಹಾಗೂ ಮಾಜಿ ಲೋಕಸಭಾ ಸದಸ್ಯ ಜಿ. ಕರುಣಾಕರ ರೆಡ್ಡಿ ದಾವಣಗೆರೆಯ ಹರಪ್ಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಆದರೆ, ರೆಡ್ಡಿ ಅವರು ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದು, ಸ್ನೇಹಿತ ಶ್ರೀರಾಮುಲು ಪರ ಪ್ರಚಾರ ನಡೆಸುತ್ತಿದ್ದಾರೆ.

ಬಳ್ಳಾರಿ ಹಾಗೂ ಅಂಧ್ರಪ್ರದೇಶದ ಅನಂತಪುರದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದಲ್ಲಿ 2009 ರಲ್ಲಿ ಜನಾರ್ದನ ರೆಡ್ಡಿ ಜೈಲು ಸೇರಿದ್ದರು. ನಂತರ 2015ರಲ್ಲಿ ಸುಪ್ರೀಂಕೋರ್ಟ್​ ಹಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.

Leave a Reply

Your email address will not be published. Required fields are marked *

Back To Top