More

    ಪಿಯುಸಿ ಪರೀಕ್ಷೆ ಹಿನ್ನೆಲೆ ಕಾಂಗ್ರೆಸ್ ಕರೆ ನೀಡಿದ್ದ ಕರ್ನಾಟಕ ಬಂದ್ ರದ್ದು

    ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

    ಕಾಂಗ್ರೆಸ್ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲು: ಸಾಧ್ಯವಾದ್ರೆ ಈ ಫೋಟೋದಲ್ಲಿರೋ ನೀರಿನ ಬಾಟಲ್​ ಗುರುತಿಸಿ

    ‘ಬಿಜೆಪಿ ಸರ್ಕಾರದ ಮಿತಿಮೀರಿದ ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮಾ.9ರ ಬೆಳಗ್ಗೆ 9 ಗಂಟೆಯಿಂದ 11 ರವರೆಗೆ ಎರಡು ಗಂಟೆಗಳ ಕಾಲ ಸಾಂಕೇತಿಕ ಬಂದ್ ಮಾಡಲು ಕಾಂಗ್ರೆಸ್ ನಿರ್ಧರಿಸಿತ್ತು.

    ಆದರೆ ಪರೀಕ್ಷೆಗಳು ಇರುವ ಕಾರಣ ಬಂದ್​ನಿಂದ ನಮಗೆ ತೊಂದರೆಯಾಗಲಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅವರ ಹಿತ ನಮ್ಮ ಆದ್ಯತೆ. ಹೀಗಾಗಿ ಅವರ ಅಭಿಪ್ರಾಯಕ್ಕೆ ಗೌರವ ನೀಡಿ ಬಂದ್ ಕರೆ ವಾಪಸ್ ಪಡೆಯಲು ತೀರ್ಮಾನಿಸಿದ್ದೇವೆ’ ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

    2ನೇ ಬಾರಿಗೆ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್​ ಸಹಾ ಪ್ರಮಾಣ ವಚನ ಸ್ವೀಕಾರ

    ಕುಡಿತ ಬಿಡು ಎಂದ ಹೆಂಡತಿಗೆ ಬೆಂಕಿ ಹಚ್ಚಿದ ಪಾಪಿ ಪತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts