More

    ಬೆಂಗ್ಳೂರಿನ ಐಪಿಎಲ್‌ ಪಂದ್ಯ ಸ್ಥಳಾಂತರ ಮಾಡಿದ್ರೆ ಕರ್ನಾಟಕ ಬಂದ್!: ಎಚ್ಚರಿಕೆ ನೀಡಿದ ವಾಟಾಳ್ ​

    ಬೆಂಗಳೂರು: ನಗರದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಬಹುನಿರೀಕ್ಷಿತ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ​ ಪಂದ್ಯಾವಳಿಗಳನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚಿಂತನೆ ನಡೆಸಿದ್ದು ಯಾವುದೇ ಕಾರಣಕ್ಕೂ ಸ್ಥಳಾಂತರಿಸಬಾರದು ಎಂದು ವಾಟಾಳ್​ ನಾಗರಾಜ್​ ಆಗ್ರಹಿಸಿದ್ದಾರೆ.

    ಇದನ್ನೂ ಓದಿ: ಆಂಧ್ರಪ್ರದೇಶ: 25 ಲೋಕಸಭೆ, 175 ವಿಧಾನಸಭೆ ಕ್ಷೇತ್ರಗಳಿಗೆ ವೈಎಸ್​ಆರ್​ಸಿಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

    ಐಪಿಎಲ್ ಪಂದ್ಯಗಳು ಬೆಂಗಳೂರಿನಿಂದ ಬೇರೆ ರಾಜ್ಯಕ್ಕೆ ಸ್ಥಳಾಂತರವಾಗುವ ಹಿನ್ನೆಲೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಮುಖ್ಯದ್ವಾರ ಬಳಿ ಕನ್ನಡ ಚಳವಳಿ ವಾಟಾಳ್​ ಪಕ್ಷ ನೇತೃತ್ವದ ಕನ್ನಡ ಹೋರಾಟಗಾರ ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, ಒಂದು ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ 17ನೇ ಆವೃತ್ತಿಯ ಐಪಿಎಲ್ ನಡೆಸದೆ ಹೋದರೆ ಕರ್ನಾಟಕ ಬಂದ್ ಮಾಡುವುದಾಗಿ ಖಡಕ್​ ಎಚ್ಚರಿಕೆ ನೀಡಿದರು.

    ಬೆಂಗಳೂರಿನಲ್ಲಿ ಜಲಕ್ಷಾಮ ಶುರುವಾಗಿದ್ದರಿಂದ ಕ್ರಿಕೆಟ್​ ಮ್ಯಾಚ್​ ಬೇರೆ ರಾಜ್ಯಕ್ಕೆ ಶಿಫ್ಟ್ ​​ಮಾಡಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚಿಂತನೆ ನಡೆಸಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಐಪಿಎಲ್​ ಮ್ಯಾಚ್​​ ಹೊರ ರಾಜ್ಯಕ್ಕೆ ಸ್ಥಳಾಂತರ ಬೇಡ. ಐಪಿಎಲ್​ ಪಂದ್ಯಗಳನ್ನ ಬೆಂಗಳೂರಿನಿಂದ ಸ್ಥಳಾಂತರ ಮಾಡದಂತೆ ಒತ್ತಾಯ ಮಾಡಿದರು.

    ಈ ವೇಳೆ ಮಾತನಾಡಿದ ವಾಟಳ್ ನಾಗರಾಜ್​, ಬೆಂಗಳುರಿನಲ್ಲಿ ನೀರು ಇಲ್ಲ ಅಂತಾ ಕಾರಣ ಕೊಟ್ಟು ಐಪಿಎಲ್ ಪಂದ್ಯಗಳನ್ನು ಬೇರೆ ರಾಜ್ಯದಲ್ಲಿ ನಡೆಸುವುದು ಕರ್ನಾಟಕಕ್ಕೆ ಅಪಮಾನ. ಹೇಳದೆ ಕೇಳದೆ ಕಾವೇರಿ ನೀರು ತಮಿಳುನಾಡಿಗೆ ಕೊಟ್ಟಿದ್ದು ಅಪಮಾನ. ಐಪಿಎಲ್ ನಡೆಯಲೇ ಬೇಕು. ನಮ್ಮ ಮನವಿಗೆ ಆಡಳಿತ ಮಂಡಳಿ ಒಪ್ಪಿಕೊಂಡಿದೆ. ತಂತ್ರಾಗಾರಿಕೆ ನಡೆಸಿ ಐಪಿಲ್ ನಡೆಸದೆ ಹೋದರೆ ಕರ್ನಾಟಕ ಬಂದ್ ಎಚ್ಚರಿಕೆ ನೀಡಿದ್ದಾರೆ.

    ಇಂಡಿಯನ್ ಪ್ರೀಮಿಯರ್ ಲೀಗ್ 2024 17ನೇ ಸೀಸನ್ ಮೊದಲ ವೇಳಾಪಟ್ಟಿಯನ್ನು ಬಿಸಿಸಿಐ ಈಗಾಗಲೇ ಬಿಡುಗಡೆ ಮಾಡಿದೆ. ಭಾರತದಲ್ಲಿ ಸಾರ್ವತ್ರಿಕ ಚುನಾವಣೆಯ ದೃಷ್ಟಿಯಿಂದ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿಲ್ಲ. ಟೂರ್ನಿಯ ಮೊದಲ 15 ದಿನಗಳಲ್ಲಿ ಕೇವಲ 21 ಪಂದ್ಯಗಳಿಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಈ ಋತುವಿನ ಮೊದಲ ಪಂದ್ಯವು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಮಾರ್ಚ್ 22 ರಂದು ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.

    ಆಂಧ್ರಪ್ರದೇಶ: 25 ಲೋಕಸಭೆ, 175 ವಿಧಾನಸಭೆ ಕ್ಷೇತ್ರಗಳಿಗೆ ವೈಎಸ್​ಆರ್​ಸಿಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts