ಮುಷ್ಕರಕ್ಕೆ ಮುಂದಾಗಿದ್ದ ಕೆಪಿಟಿಸಿಎಲ್​, ಎಸ್ಕಾಂ ನೌಕರರಿಗೆ ಸಿಹಿ ಸುದ್ದಿ ನೀಡಿದ ಬೊಮ್ಮಾಯಿ ಸರ್ಕಾರ

kptcl
Published on

ಬೆಂಗಳೂರು: ಇಂದು ಬೆಳಗ್ಗೆ ಕೆಪಿಟಿಸಿಎಲ್​, ಎಸ್ಕಾಂ, ಬೆಸ್ಕಾಂ ನೌಕರರು ಸಂಬಳ ಏರಿಸುವಂತೆ ಒತ್ತಡ ಹಾಕಲು ನಾಳೆಯಿಂದ ಅನಿರ್ದಿಷ್ಟಾವಧಿವರೆಗೆ ಪ್ರತಿಭಟನೆಗೆ ಮುಂದಾಗಿದ್ದರು. ಇದರ ಪ್ರಭಾವ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಮೇಲೆ ತಟ್ಟಿದ್ದು ಸಂಬಳ ಏರಿಸುವಂತೆ ಆದೇಶ ಹೊರಡಿಸಲಾಗಿದೆ.

ಇದೀಗ ಬಿಜೆಪಿ ಸರ್ಕಾರ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನೌಕರರ ವೇತನವನ್ನು ಶೇ. 20 ರಷ್ಟು ಹೆಚ್ಚಳ ಮಾಡಿ ಅದೇಶ ಮಾಡಿದೆ. ಕೆಪಿಟಿಸಿಎಲ್ ಹಾಗೂ ಎಲ್ಲಾ ಎಸ್ಕಾಂ ನೌಕರರ ವೇತನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2022 ರ ಏಪ್ರಿಲ್​ನಿಂದ ಪೂರ್ವನ್ವಯವಾಗುವಂತೆ ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರು ಪ್ರತಿಭಟನೆಗೆ ಮುಂದಾಗಿದ್ದರು. ಈ ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಕೆಪಿಟಿಸಿಎಲ್‌ ಹಾಗೂ ಎಸ್ಕಾಂ ನೌಕರರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net