More

    ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕರ್ನಾಟಕದಲ್ಲೂ ರಜೆ ಘೋಷಣೆಗೆ ಬಿಜೆಪಿ, ವಕೀಲರ ಸಂಘ ಆಗ್ರಹ

    ಬೆಂಗಳೂರು: ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಜನವರಿ 22 ರಂದು ಶ್ರೀರಾಮ ಮಂದಿರದ ಗರ್ಭ ಗೃಹದಲ್ಲಿ ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದ್ದು, ಸಿದ್ಧತಾ ಕಾರ್ಯಕ್ರಮಗಳು ಭರದಿಂದ ಸಾಗಿವೆ.

    ಇದನ್ನೂ ಓದಿ:ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ; ಮಹಾರಾಷ್ಟ್ರ, ಪುದುಚೇರಿಯಲ್ಲಿ ರಜೆ ಘೋಷಣೆ

    ಇನ್ನು ಕೇಂದ್ರ ಸರ್ಕಾರ, ಜನವರಿ 22ರಂದು ಅರ್ಧ ದಿನ ಸರ್ಕಾರಿ ರಜೆ ಘೋಷಿಸಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಸಹ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಅವರು ಸಿಎಂ ಸಿದ್ದರಾಮಯ್ಯಗೆ ಒತ್ತಾಯಿಸಿದ್ದಾರೆ.

    ಜ. 22ರಂದು ಪೂರ್ತಿ ಅಥವಾ ಅರ್ಧ ದಿನ ರಜೆ ಘೋಷಿಸುವಂತೆ ಬೆಂಗಳೂರು ವಕೀಲರ ಸಂಘ ಸಹ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಕೇಂದ್ರ ಸರ್ಕಾರ ಈಗಾಗಲೇ ಅರ್ಧ ದಿನ ರಜೆ ಘೋಷಿಸಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ರಜೆ ಘೋಷಿಸಬೇಕೆಂದು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಮನವಿ ಮಾಡಿದ್ದಾರೆ. ಅಲ್ಲದೇ ಈಗಾಗಲೇ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೂ ಮನವಿ ಸಲ್ಲಿಕೆ ಮಾಡಿದ್ದಾರೆ.

    ಬಿಹಾರ ಬಳಿಕ ಆಂಧ್ರದಲ್ಲಿ ಜಾತಿಗಣತಿ ಶುರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts