ರಾಹುಲ್ ಗಾಂಧಿಗೂ ನಿರುದ್ಯೋಗ ಭತ್ಯೆ ದಯಪಾಲಿಸಿ! ಬಿಜೆಪಿ ವ್ಯಂಗ್ಯ

rahul gandhi
Published on

ಬೆಂಗಳೂರು: ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಭರವಸೆ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದಾರೆ. ಗ್ಯಾರಂಟಿ ಯೋಜನೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್​ ಟ್ವೀಟರ್ ಮೂಲಕ ಬಿಜೆಪಿ ನಾಯಕರನ್ನು ಉಲ್ಲೇಖಿಸಿ ವ್ಯಂಗ್ಯವಾಡಿತ್ತು.

ಇದೀಗ ರಾಜ್ಯ ಬಿಜೆಪಿ ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ. ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿರುವ ನಿರುದ್ಯೋಗ ಭತ್ಯೆಯನ್ನು ಪಧವೀಧರರಾಗಿದ್ದರೆ ರಾಹುಲ್ ಗಾಂಧಿ ಹಾಗೂ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೂ ದಯಪಾಲಿಸಿ ಎಂದು ರಾಜ್ಯ ಬಿಜೆಪಿ ಹೇಳಿದೆ.

ಏನಿದು ಕಾಂಗ್ರೆಸ್ ಟ್ವೀಟ್

ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಆರಂಭದಿಂದಲೂ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದರು. ಹೀಗಾಗಿ ಸಿದ್ದರಾಮಯ್ಯ ಯೋಜನೆಗಳನ್ನು ಘೋಷಿಸುತ್ತಿದ್ದಂತೆ, ಬಸವರಾಜ ಬೊಮ್ಮಾಯಿ ಹಾಗೂ ನಳಿನ್ ಕುಮಾರ್ ಕಟೀಲ್ ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ ಎಂದು ಟ್ವೀಟ್ ಮಾಡಿ ಕಾಂಗ್ರೆಸ್ ಟಾಂಗ್ ಕೊಟ್ಟಿತ್ತು.

ಜತೆಗೆ ಶೋಭಾ ಕರಂದ್ಲಾಜೆ ಅವರನ್ನು ಟ್ಯಾಗ್ ಮಾಡಿ ನಿಮಗೂ ಪ್ರಯಾಣ ಫ್ರೀ! ಸಿ.ಟಿ. ರವಿ ಅವರೇ, ನಿಮ್ಮ ಮನೆಯವರಿ 2000 ರೂ. ಫ್ರೀ. ಅಲ್ಲದೆ ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)! ಇದು ನಮ್ಮ ಗ್ಯಾರಂಟಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಹೇಳಿಕೊಂಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net