More

    ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸಲು ಗಡಿ ಅಭಿವೃದ್ಧಿ ಪ್ರಾಧಿಕಾರದ ಒತ್ತಾಯ

    ಬೆಂಗಳೂರು: ಗೋವಾ ರಾಜ್ಯದ ಸಂಗೋಡ್ಲಾದಲ್ಲಿ ವಾಸಿಸುತ್ತಿದ್ದ ಕನ್ನಡಿಗರ ಮನೆಗಳನ್ನು ಧ್ವಂಸಗೊಳಿಸಿ ಅಮಾನವೀಯವಾಗಿ ನಡೆದುಕೊಂಡಿರುವ ಗೋವ ರಾಜ್ಯದ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಕೂಡಲೇ ನಿರ್ಗತಿಕ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸುವಂತೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಒತ್ತಾಯ ಮಾಡಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ್, ಗೋವಾ ಮುಖ್ಯಮಂತ್ರಿಗಳಿಗೆ ಈ ಸಂಬಂಧ ಪತ್ರ ಬರೆದು ಒತ್ತಾಯಿಸುವಂತೆ ಮನವಿ ಮಾಡಿದ್ದಾರೆ.

    ಗೋವಾ ರಾಜ್ಯವು ಪ್ರಾವಾಸೋಧ್ಯಮಕ್ಕೆ ಹೇರಳ ಅವಕಾಶಗಳಿರುವ ರಾಜ್ಯವಾಗಿದ್ದು, ಕರ್ನಾಟಕದಿಂದ ಕಳೆದ 40-50 ವರ್ಷಗಳಿಂದ ಗೋವಾಕ್ಕೆ ಹೋಗಿ ಕೆಲಸ ಮಾಡುತ್ತಿರುವ ಸಾವಿರಾರು ಕನ್ನಡ ಕಾರ್ಮಿಕರಿದ್ದಾರೆ. ಅಂತಹ ಕಾರ್ಮಿಕರ ಮೇಲೆ ನಿರಂತರವಾಗಿ ಅಲ್ಲಿನ ಸರ್ಕಾರ ವಿವಿಧ ಸಂದರ್ಭಗಳಲ್ಲಿ ದೌರ್ಜನ್ಯವೆಸುಗುತ್ತಿದ್ದು, ಈ ಬಗ್ಗೆ ಸಾಕಷ್ಟು ಬಾರಿ ಗೋವಾ ಸರ್ಕಾರಕ್ಕೆ ಮನವಿ ಮಾಡಿದರೂ ಕೂಡಾ ಸರ್ಕಾರ ಸ್ಪಂದಿಸುತ್ತಿಲ್ಲ. ಯಾರನ್ನೇ ಒಕ್ಕಲೆಬ್ಬಿಸುವ ಸಂದರ್ಭದಲ್ಲಿ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂಬ ಸರ್ವೋಚ್ಛ ನ್ಯಾಯಾಲದ ಆದೇಶವನ್ನು ಗೋವಾ ಸರ್ಕಾರ ಉಲ್ಲಂಸಿದ್ದು ಈ ಬಗ್ಗೆ ಗೋವಾ ರಾಜ್ಯದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ಗಮನ ಸೆಳೆಯುವಂತೆ, ಕರ್ನಾಟಕದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಸೋಮಣ್ಣ ಮನವಿ ಮಾಡಿದ್ದಾರೆ.

    ಗೋವಾ ರಾಜ್ಯದ ನಡೆ ಮಾನವ ಹಕ್ಕುಗಳ ಉಲ್ಲಂಘನೆಯೂ ಆಗಿದ್ದು, ಈ ಬಗ್ಗೆ ಕೇಂದ್ರ ಮಾನವ ಹಕ್ಕುಗಳ ಆಯೋಗ ಮಧ್ಯ ಪ್ರವೇಶಿಸುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ಬೇವಿನಮರದ್ ಪತ್ರ ಬರೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts