More

    ರಾಜ್ಯಬಜೆಟ್ 2020: ರಾಜ್ಯದ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಅಭಿವೃದ್ಧಿಗೂ ಕ್ರಮ, ರಾಜೀವ್​ ಗಾಂಧಿ ಆರೋಗ್ಯ ವಿವಿಯಲ್ಲಿ ಕೇಂದ್ರೀಕೃತ ಉದ್ಯೋಗ ಕೋಶ

    ಬೆಂಗಳೂರು: ರಾಜ್ಯದ ಆರೋಗ್ಯ ಶಿಕ್ಷಣ ಮತ್ತು ಸೇವಾ ಕ್ಷೇತ್ರದ ಕಡೆಗೆ ಗಮನವಹಿಸಿರುವ ಸರ್ಕಾರ, ರಾಜ್ಯದ 17 ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ನವಜಾತ ಶಿಶುವಿನ ತೀವ್ರ ನಿಗಾ ಘಟಕಗಳ (Neonatal Intensive Care Unit) ಹಂತ ಹಂತವಾಗಿ ಉನ್ನತೀಕರಣ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳೂರಿನ ವಿಭಾಗೀಯ ಆಧುನಿಕ ಮಕ್ಕಳ ಆರೋಗ್ಯ ಕೇಂದ್ರದ ಮಾದರಿಯ ಕೇಂದ್ರಗಳ ಸ್ಥಾಪನೆ ಮಾಡುವುದಾಗಿ ಘೋಷಿಸಿದೆ.

    ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ಮೂರು ಕೋಟಿ ರೂ. ವೆಚ್ಚದಲ್ಲಿ ಸಿಮ್ಯುಲೇಷನ್ ಲ್ಯಾಬ್ ಮತ್ತು ತಲಾ 30 ಲಕ್ಷ ರೂ. ವೆಚ್ಚದಲ್ಲಿ ಮಾಲಿಕ್ಯುಲಾರ್ ಬಯಾಲಜಿ ಲ್ಯಾಬ್ ಸ್ಥಾಪನೆಯನ್ನು ಪ್ರಕಟಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆರ್ಥಿಕ ನೆರವಿನೊಂದಿಗೆ ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ಶಾಸ್ತ್ರದ ಸಂಸ್ಥೆ ಮತ್ತು ಜಿರಿಯಾಟ್ರಿಕ್ಸ್ ಸಂಸ್ಥೆಗಳನ್ನು ಸ್ಥಾಪಿಸುವುದಾಗಿಯೂ ಹೇಳಿದರು.

    ವೈದ್ಯಕೀಯ, ಶುಶ್ರೂಷಾ, ಅರೆ-ವೈದ್ಯಕೀಯ ಮತ್ತು ಫಾರ್ಮಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಂದು ಕೇಂದ್ರೀಕೃತ ಉದ್ಯೋಗ ಕೋಶ ಸ್ಥಾಪಿಸುವ ವಿಚಾರವನ್ನೂ ಸಿಎಂ ಬಿಎಸ್​ವೈ ಸದನದಲ್ಲಿ ಪ್ರಕಟಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts