

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಡಿಸಿದ ಬಜೆಟ್ಗೆ ನಾನ್ಯಾಕೆ ಅಂಕ ಕೊಡಲಿ, ಜನರೇ ಕೊಡುತ್ತಾರೆ. ಬಜೆಟ್ನಲ್ಲಿ ಯಾವುದೇ ಸ್ಪಷ್ಟತೆ ಇಲ್ಲವೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಎಸ್ವೈ ಅವರು ಪ್ರಧಾನಿ ನರೇಂದ್ರ ಮೋದಿ ಮಾರ್ಗದಲ್ಲೇ ಹೋಗುತ್ತೇನೆ ಎಂದು ಹೇಳಿದ್ದಾರೆ. ಮೋದಿ ಅವರು ಅರ್ಥಿಕವಾಗಿ ದೇಶಕ್ಕೆ ಯಾವ ರೀತಿ ಕೊಡುಗೆ ಕೊಡುತ್ತಿದ್ದಾರೋ, ಅದೇ ರೀತಿಯ ಮಾರ್ಗದಲ್ಲಿ ಹೋಗುತ್ತೇನೆ ಎಂದು ಹೇಳಿದ್ದಾರೆ. ದೇಶದ ಆರ್ಥಿಕ ಪರಿಸ್ಥಿತಿ ತಿಳಿದಿದೆಯಲ್ಲ ಎಂದು ವ್ಯಂಗ್ಯವಾಡಿದರು.
ನಮ್ಮ ರಾಜ್ಯ ತೆರಿಗೆ ಸಂಗ್ರಹದಲ್ಲಿ ಹಿಂದೆ ಏನು ಬಿದ್ದಿಲ್ಲ. ಕಳೆದ ಬಜೆಟ್ನಲ್ಲಿ ಇಟ್ಟುಕೊಂಡಿದ್ದ ತೆರಿಗೆ ಸಂಗ್ರಹದ ನಿರೀಕ್ಷೆಯ ಹತ್ರ ಹೋಗಿದ್ದೇವೆ. ಆದರೆ, ಬಜೆಟ್ನಲ್ಲಿ ಯಾವುದು ಕೂಡ ಸ್ಪಷ್ಟತೆ ಇಲ್ಲ. ಕೆಲವು ನನ್ನ ಕಾರ್ಯಕ್ರಮಗಳೇ ಮುಂದುವರಿದಿವೆ. ಕೇಂದ್ರ ಸರ್ಕಾರ ನಮ್ಮ ಪಾಲು ಕೊಡುತ್ತಾರೋ, ಇಲ್ಲವೋ ಎನ್ನುವುದನ್ನು ಜನರಿಗೆ ಸ್ಪಷ್ಟ ಸಂದೇಶ ಕೊಡಲು ಸಾಧ್ಯವಾಗಿಲ್ಲ ಎಂದು ಬಜೆಟ್ ಕುರಿತು ಎಚ್ಡಿಕೆ ಅಸಮಾಧಾನ ಹೊರಹಾಕಿದರು. (ದಿಗ್ವಿಜಯ ನ್ಯೂಸ್)