

ಬೆಂಗಳೂರು: ಅಮರ್ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.
ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ ಸಿಎಂ ಬೊಮ್ಮಾಯಿ, ಹಿಂದುಳಿದ ವರ್ಗಗಳ 11 ಅಭಿವೃದ್ಧಿ ನಿಗಮಗಳಿಗೆ 569 ಕೋಟಿ ರೂ. ಅನುದಾನವನ್ನು ಮೀಸಲಿಡುವುದಾಗಿ ಘೋಷಣೆ ಮಾಡಿದರು.
69,000 ಬೀದಿ ವ್ಯಾಪಾರಿಗಳಿಗೆ 70 ಕೋಟಿ ರೂ. ಸಾಲ ಮಂಜೂರು, ಎಸ್ಸಿ-ಎಸ್ಟಿ ನಿಗಮಗಳಿಗೆ 795 ಕೋಟಿ ರೂ. ಮೀಸಲಿಡುವುದಾಗಿ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಒದಗಿಸಲಾಗಿದೆ. ಮಾರಣಾಂತಿಕ ಕಾಯಿಲೆ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂ. ಆರ್ಥಿಕ ಭದ್ರತೆ ಜೊತೆಗೆ ಸ್ವಯಂ ನಿವೃತ್ತಿ ಅವಕಾಶ ನೀಡುವುದಾಗಿ ಸಿಎಂ ಬೊಮ್ಮಾಯಿ ಅವರು ಘೋಷಣೆ ಮಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್ ಮಂಡನೆಯಾಗಿದೆ.