

ಬೆಂಗಳೂರು: ಬಜೆಟ್ ಮಂಡನೆಗೂ ಮುನ್ನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯುತ್ತಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವರು ಹಾಗೂ ಶಾಸಕರು ಭಾಗಿಯಾಗಿದ್ದಾರೆ.
ಸಭೆಯಲ್ಲಿ ಜು.14 ರಿಂದ ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಚಾಲನೆ ನೀಡುವುದಾಗಿ ಶಾಸಕರಿಗೆ ಮಾಹಿತಿ ನೀಡಲಾಗಿದೆ. ಫಲಾನುಭವಿ ಮಹಿಳೆ ಅಥವಾ ಅವರ ಪತಿ ತೆರಿಗೆ ಕಟ್ಟುತ್ತಿದ್ದರೆ ಅವರಿಗೆ ಈ ಸೌಲಭ್ಯ ಇರುವುದಿಲ್ಲ. ಎರಡು ರೀತಿ ನೋಂದಣಿಗೆ ಅವಕಾಶ ಇರಲಿದೆ.
ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಮ್ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಬೆಂಗಳೂರು ಒನ್, ಅಟಲ್ ಜನ ಸೇವಾ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಪ್ರಜಾಪ್ರತಿನಿಧಿಗಳು ಫಲಾನುಭವಿಗಳ ಮನೆ ಮನೆಗೆ ಹೋಗಿ ನೋಂದಣಿಗೆ ಮಾಡಿಕೊಳ್ಳುತ್ತಾರೆ.
ಹಾಗಾಗಿ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಗೃಹಲಕ್ಷ್ಮಿ ಯೋಜನೆ ಯೋಜನೆಯನ್ನು ಯಶಸ್ವಿ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೂಚಿಸಿದ್ದಾರೆ.