More

    ಈ 11 ನಗರಗಳಲ್ಲಿ ರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ

    ಬೆಂಗಳೂರು: ಬೆಂಗಳೂರು ಸೇರಿದಂತೆ 11 ನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಈ ನಗರಗಳಲ್ಲಿ ರಾತ್ರಿ 11 ಗಂಟೆಯವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡುವುದಾಗಿ ಬಜೆಟ್​​​​ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

    ವಾಣಿಜ್ಯ ಮತ್ತು ವ್ಯಾಪಾರದ ಹಿತದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ ವಹಿವಾಟಿನ ಸಮಯವನ್ನು ಹೆಚ್ಚಿಸಲಾಗಿದ್ದು, ಬೆಳಗಿನ ಜಾವ 1:00 ಗಂಟೆಯವರೆಗೆ ವ್ಯಾಪಾರ ವಹಿವಾಟು ಮಾಡಲು ಅವಕಾಶ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

    ಯಾವ್ಯಾವ ನಗರಗಳು?
    ಬಿಬಿಎಂಪಿ ಸೇರಿ ರಾಜ್ಯದಲ್ಲಿ ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ತುಮಕೂರು, ವಿಜಯಪುರ ಮಹಾನಗರಪಾಲಿಕೆಗಳಿದ್ದು, ಈ ಎಲ್ಲಾ ಮಹಾನಗರ ವ್ಯಾಪ್ತಿಗಳಲ್ಲಿ ಇನ್ನೂ ಮುಂದೆ ರಾತ್ರಿ 1:00 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಯಲಿದೆ.

    ಬಡಜನರಿಗೆ ಉಚಿತ ಪ್ರಯೋಗಾಲಯ 
    ಬೆಂಗಳೂರಿನ ಬಡಜನರಿಗೆ ಉಚಿತ ಪ್ರಯೋಗಾಲಯ ಸೇವೆ ಒದಗಿಸಲಾಗುವುದು. ಇದಕ್ಕೆ 430 ಪ್ರಯೋಗಾಲಯಗಳ ಸ್ಥಾಪನೆಗೆ 20 ಕೋಟಿ ಮೀಸಲು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್​​​​ನಲ್ಲಿ ಘೋಷಣೆ ಮಾಡಿದರು. ವೈದ್ಯಕೀಯ ಕಾಲೇಜುಗಳ ನಿರ್ಮಾಣ, ಉಪಕರಣ ಖರೀದಿಗೆ 400 ಕೋಟಿ ಅನುದಾನ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

    Karnataka Budget: 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts