More

    ರೈತರಿಗಾಗಿ ರಾಜ್ಯ ಸರ್ಕಾರ ನೀಡಿದ ನೆರವು ಎಷ್ಟು?

    ಬೆಂಗಳೂರು: ಈ ಬಾರಿಯ ಬಜೆಟ್, ಅಭಿವೃದ್ಧಿ ಹಾಗೂ ಉತ್ತಮ ಭವಿಷ್ಯಕ್ಕಾಗಿ ರೂಪಿಸಿದ ಬಜೆಟ್​ ಆಗಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ, ರಾಜ್ಯದ ರೈತರಿಗಾಗಿ ಏನೇನು ನೆರವು ನೀಡಲಾಗಿದೆ ಎಂದು ಮಹಿತಿ ನೀಡಿದರು.

    ತಮ್ಮ ಬಜೆಟ್ ಭಾಷಣದ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ, ‘ಪಿಎಂ-ಕಿಸಾನ್ ಯೋಜನೆಯಡಿ ಕೇಂದ್ರ 10,930 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂ. ಒಟ್ಟಾರೆ 15,752 ಕೋಟಿ ರೂ. ಗಳನ್ನು ರೈತರ ಖಾತೆಗೆ ನೇರ ಜಮೆ ಮಾಡಲಾಗಿದೆ. ಕಳೆದ ವರ್ಷ ಘೋಷಿಸಿದ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ 400 ಕೋಟಿ ರೂ. ಒದಗಿಸಲಾಗಿದೆ. ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸಲು 2,037 ಕೋಟಿ ರೂ. ಒದಗಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆಯಲ್ಲಿ ಹನಿ ನೀರಾವರಿಗಾಗಿ 2,900 ಕೋಟಿ ರೂ., ಮಾರುಕಟ್ಟೆ ನೆರವು ನೀಡಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ 962 ಕೋಟಿ ರೂ. ವೆಚ್ಚ ಮಾಡಲಾಗಿದೆ’ ಎಂದರು.

    ಈ ಬಾರಿ ನೀರಾವರಿ ಪಂಪ್‌ಸೆಟ್‌ಗಳಿಗೆ 52,590 ಕೋಟಿ ರೂ. ವಿದ್ಯುತ್‌ ಸಹಾಯಧನ ನೀಡಲಾಗಿದ್ದು ಫಸಲ್ ಬಿಮಾ ಯೋಜನೆಯಡಿ 86 ಲಕ್ಷ ರೈತರ ಬೆಳೆ ವಿಮೆಗಾಗಿ 4,900 ಕೋಟಿ ರೂ. ಪ್ರೀಮಿಯಂ ಪಾವತಿಸಲಾಗಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ, ರಾಗಿ, ಜೋಳ, ಹೆಸರುಕಾಳು ಮತ್ತು ತೊಗರಿ ಮುಂತಾದ ಆಹಾರ ಧಾನ್ಯಗಳ ಖರೀದಿಗಾಗಿ 6,650 ಕೋಟಿ ರೂ. ಒದಗಿಸಲಾಗಿದ್ದು. ಬೆಳೆಗಳ ಸಂಸ್ಕರಣೆ, ಶೇಖರಣೆಗಾಗಿ 10.45 ಫಲಾನುಭವಿಗಳಿಗೆ 175 ಕೋಟಿ ರೂ. ಗಳ ನೆರವು ನೀಡಲಾಗಿದೆ. ತೋಟಗಾರಿಕೆ ಹಾಗೂ ರೇಷ್ಮೆ ಕೃಷಿಗೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿ 5,245 ಕೋಟಿ ರೂ. ವೆಚ್ಚ ಮಾಡಲಾಗಿದೆ.

    ರೈತ ವಿದ್ಯಾನಿಧಿ ಯೋಜನೆಯಡಿಯಲ್ಲಿ 10,32 ಲಕ್ಷ ವಿದ್ಯಾರ್ಥಿಗಳಿಗೆ ಒಟ್ಟು 725 ಕೋಟಿ ರೂ. ಗಳನ್ನು ನೀಡಲಾಗಿದೆ. ರೈತರ ಸಾಲ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದ್ದು ಇದನ್ನು ಶೂನ್ಯ ಬಡ್ಡಿದರದಲ್ಲಿ ನೀಡಲಾಗುವುದು. ಅಷ್ಟೇ ಅಲ್ಲದೇ ರೈತರಿಗೆ ಭೂಸಿರಿ ಯೋಜನೆ ಜಾರಿ ಮಾಡಲು ಹಾಗೂ ಹತ್ತು ಸಾವಿರ ರೂಪಾಯಿ ನೀಡಲು ತೀರ್ಮಾನ ಮಾಡಲಾಗಿದ್ದು ಬೀಜ, ಗೊಬ್ಬರ ,ಕ್ರಿಮಿನಾಶಕ ಖರೀದಿ ಮಾಡಲು ನೆರವು ನೀಡಲಾಗುವುದು ಎನ್ನಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts