ಕರ್ನಾಟಕದ ಗ್ಯಾರಂಟಿ ಇಡೀ ದೇಶಕ್ಕೆ ಮಾದರಿ; ರಾಜ್ಯಪಾಲ ಗೆಹ್ಲೋಟ್

blank

ಬೆಂಗಳೂರು: ವಿಧಾನಮಂಡಲ ಬಜೆಟ್​​ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವ ವೇಳೆ  ರಾಜ್ಯ ಸರ್ಕಾರದ  ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿದ್ದಾರೆ.

blank

ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯವು ದಾಖಲಾರ್ಹ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ. ಕರ್ನಾಟಕ ಸರ್ಕಾರದ ಗ್ಯಾರಂಟಿ ಮಾದರಿಯಾಗಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ.  ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ ಎಂದಿದ್ದಾರೆ.

ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ. ಈ ಎಂಟು ತಿಂಗಳಲ್ಲಿ 77,000 ಕೋಟಿಗೂ ಹೆಚ್ಚು ಬಂಡವಾಳವು ರಾಜ್ಯಕ್ಕೆ ಹರಿದು ಬಂದಿದೆ. ಜನವರಿ ತಿಂಗಳ ಅಂತ್ಯದವರೆಗೆ ನಮ್ಮ ರಾಜ್ಯದ ಜಿಎಸ್‌ಟಿ ಸಂಗ್ರಹಣೆಯ ಬೆಳವಣಿಗೆ ದರವು ಇಡೀ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದಿದ್ದಾರೆ.

Share This Article
blank

ನೀವು ಎಷ್ಟೇ ಸಂಪಾದಿಸಿದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲವೇ? ಸಾಲದಲ್ಲಿ ಮುಳುಗುತ್ತಿದ್ದೀರಾ? ಇಲ್ಲಿವೆ ಸಲಹೆಗಳು..Money Tips

Money Tips: ನಾವು ದಿನ ನಿತ್ಯ ಕಷ್ಟ ಪಟ್ಟು ದುಡಿದು ಹಣ ಸಂಪಾದಿಸುತ್ತೇವೆ. ಆದರೆ ನಮ್ಮ…

ಮಳೆಗಾಲದಲ್ಲಿ ಗರ್ಭಿಣಿಯರು ತೆಗೆದುಕೊಳ್ಳಬೇಕಾದ ಪ್ರಮುಖ ಮುನ್ನೆಚ್ಚರಿಕೆಗಳು! rainy season

rainy season: ಈಗಾಗಲೇ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಈ ಹವಾಮಾನ  ಅನೇಕ ರೋಗಗಳು ಮತ್ತು ಸೋಂಕುಗಳ…

blank