ನವದಂಪತಿಗೆ ಗುಡ್​​ ನ್ಯೂಸ್​​ ಕೊಟ್ಟ ಸಿದ್ದರಾಮಯ್ಯ ಬಜೆಟ್​​; ವಿವಾಹ ನೋಂದಣಿ ಮತ್ತಷ್ಟು ಸುಲಭ

wedding
Published on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡನೆ ಮಾಡಿರುವ ಬಜೆಟ್​​ ಮೂಲಕವಾಗಿ​ ವಿವಾಹ ನೋಂದಾಣಿಯನ್ನು ಮತ್ತಷ್ಟು ಸರಳೀಕರಣಗೊಳಿಸಿದ್ದಾರೆ. ಇದುವರೆಗೆ ವಿವಾಹ ನೋಂದಣಿಗಾಗಿ ತಾಲೂಕು ಹಂತದ ಕಚೇರಿಗಳಿಗೆ ಅಲೆಯಬೇಕಿತ್ತು. ಇದೀಗ ಗ್ರಾಮ ಪಂಚಾಯಿತಿಗಳಲ್ಲೇ ವಿವಾಹ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ.

ಕಾವೇರಿ2.0 ತಂತ್ರಾಶದಲ್ಲಿ ಆನ್ ಲೈನ್ ಮೂಲಕ ನೋಂದಣಿಗೆ ಅವಕಾಶ ನೀಡಲಾಗುವುದು. ಗ್ರಾಮ ಪಂಚಾಯತಿ ಬಾಪೂ ಸೇವಾ ಕೇಂದ್ರ ಹಾಗು ಗ್ರಾಮ-1 ನಲ್ಲಿಯೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುವುದು ಎಂದು ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

ಇನ್ಮುಂದೆ ರಿಜಿಸ್ಟರ್​ ಮ್ಯಾರೇಜ್ ಆಗುವವರು ತಮ್ಮ ಗ್ರಾಮ ಪಂಚಾತಿಗಳಲ್ಲೇ ನೋಂದಣಿ ಮಾಡಿಕೊಳ್ಳಬಹುದು. ಈ ಮೊದಲು ವಿವಾಹ ನೋಂದಣಿಗಾಗಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಅಲೆಯಬೇಕಿತ್ತು. ಇದೀಗ ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಚಾಯಿತಿಗಳಲ್ಲಿ ವಿವಾಹ ನೋಂದಣಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಾಹ ನೋಂದಾಣಿ ಮಾಡಿಕೊಳ್ಳುವವರಿಗೆ ಅನುಕೂಲವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net