More

    ‘ಕರ್ನಾಟಕ ಆಕ್ರಮಿತ ಪ್ರದೇಶ’ ಎಂದ ಉದ್ಧವ್ ಠಾಕ್ರೆಗೆ ಬಿಎಸ್​ವೈ ತರಾಟೆ

    ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಬೆಳಗಾವಿ ಭೇಟಿಯ ಸಂದರ್ಭದಲ್ಲೇ ಮಹಾರಾಷ್ಟ್ರ ಸರ್ಕಾರ ತನ್ನ ಹಳೇ ಚಾಳಿ ಮುಂದುವರಿಸಿದ್ದು, ಗಡಿ ಕ್ಯಾತೆ ತೆಗೆದ ಶಿವಸೇನಾ ಮುಖ್ಯಸ್ಥರೂ ಆದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಕರುನಾಡಿನ ಜನತೆ ಕಿಡಿಕಾರಿದ್ದಾರೆ.

    ‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮತ್ತೆ ಮಹಾರಾಷ್ಟ್ರದಲ್ಲಿ ವಿಲೀನಗೊಳಿಸುವುದೇ ತಮ್ಮ ಆದ್ಯತೆ’ ಎಂದು ಟ್ವೀಟ್​ ಮಾಡುವ ಮೂಲಕ ಉದ್ಧಟತನ ತೋರಿದ ಉದ್ಧವ್​ ಠಾಕ್ರೆಗೆ ಸಿಎಂ ಯಡಿಯೂರಪ್ಪ ಟ್ವೀಟ್​ ಮೂಲಕವೇ ತರಾಟೆಗೆ ತೆಗೆದುಕೊಂಡಿದ್ದಾರೆ. ‘ಮಹಾಜನ್ ವರದಿಯೇ ಅಂತಿಮ’ ಎಂದು ಬಿಎಸ್​ವೈ ಹೇಳಿದ್ದಾರೆ. ಇದನ್ನೂ ಓದಿರಿ ಕುಮಾರಸ್ವಾಮಿ ನನ್ನ ಸ್ನೇಹಿತ..! ಸಚಿವರಾದ ಬೆನ್ನಲ್ಲೇ ಅಚ್ಚರಿ ಹೇಳಿಕೆ ಕೊಟ್ಟ ಯೋಗೇಶ್ವರ್​

    ‘ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವುದಾಗಿ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ’ ಎಂದಿರುವ ಬಿಎಸ್​ವೈ, ‘ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ’ ಎಂದಿದ್ದಾರೆ.

    ‘ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ. ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ’ ಎಂದು ಆಗ್ರಹಿಸಿದ್ದಾರೆ.

    ತಾನೇ ಸಾಕಿದ್ದ ಹಸುಗೆ ಬಲಿಯಾದ ಬಾಲಕ! ಮುಗಿಲುಮುಟ್ಟಿದೆ ಕುಟುಂಬಸ್ಥರ ಆಕ್ರಂದನ

    ಅಣ್ಣ-ತಮ್ಮನಿಂದ ನಿರಂತರ ಅತ್ಯಾಚಾರ: ಲವ್ ಜಿಹಾದ್​ಗೆ ಸಿಲುಕಿ ನರಳಾಡುತ್ತಿದ್ದಾಳೆ ಬೆಂಗಳೂರಿನ ಯುವತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts