More

    ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರಲಿರುವ VVIPಗಳು ಯಾರು? ಆಹ್ವಾನಿತರ ಪಟ್ಟಿ ಇಂತಿದೆ…

    ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಶನಿವಾರ (ಮೇ 20)ದಂದು ಎರಡನೇ ಬಾರಿಗೆ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ, ಸಂಸದೆ ಸೋನಿಯಾ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪಕ್ಷದ ಇತರ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

    ಇದನ್ನೂ ಓದಿ: ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು; ಡಾ.ಜಿ ಪರಮೇಶ್ವರ್​​

    ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ಅತಿಥಿಗಳ ವಿವರ…

    ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೇಲ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಹಿಮಾಚಲ ಪ್ರದೇಶ ಸುಖವಿಂದರ್ ಸಿಂಗ್ ಸುಖು, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಎನ್‌ಸಿಪಿ ಮಾಜಿ ಮುಖ್ಯಸ್ಥ ಶರದ್ ಪವಾರ್. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಎನ್‌ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಮತ್ತು ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರನ್ನೂ ಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

    ಇದನ್ನೂ ಓದಿ: ಬಿಜೆಪಿ ನಾಯಕರ ಫೋಟೋಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ | ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರಿಂದ ದೌರ್ಜನ್ಯ; ವ್ಯಾಪಕ ಖಂಡನೆ

    ಪ್ರಮಾಣ ವಚನ ಕಾರ್ಯಕ್ರಮದ ಅತಿಥಿಗಳಿಗೆ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಕರೆ ಮಾಡಿ ಆಹ್ವಾನಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts