ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ವಿಸರ್ಜನೆಗೆ ಆದೇಶಿಸಿದ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್‌ ಕಳಪೆ ಪ್ರದರ್ಶನ ಮಾಡಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್‌ ಸಮಿತಿಗೆ ಹೈಕಮಾಂಡ್‌ ಮೇಜರ್‌ ಸರ್ಜರಿ ಮಾಡಲು ಮುಂದಾಗಿದೆ.

ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರನ್ನು ಹೊರತು ಪಡಿಸಿ ಉಳಿದ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿ ಕೆಪಿಸಿಸಿ ಘಟಕ ಪುನಾರಚನೆಗೆ ಎಐಸಿಸಿ ಮಹತ್ವದ ಆದೇಶ ಹೊರಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಹೊತ್ತಿರುವ ಕೆ ಸಿ ವೇಣುಗೋಪಾಲ್‌ ಎಲ್ಲ ಘಟಕದ ಪದಾಧಿಕಾರಿಗಳ ನೇಮಕಕ್ಕೆ ಸೂಚನೆ ನೀಡಿದ್ದಾರೆ.

ಚುನಾವಣಾ ಸಮಿತಿ, ಚುನಾವಣಾ ಪ್ರಚಾರ ಸಮಿತಿ, ಕೆಪಿಸಿಸಿ ಸಮನ್ವಯ ಸಮಿತಿ, ಕಾರ್ಯಕಾರಣಿ ಸಮಿತಿ, ಸಾಮಾಜಿಕ ಜಾಲತಾಣ ಸಮಿತಿ ಸೇರಿದಂತೆ ಸುಮಾರು 310 ಪದಾಧಿಕಾರಿಗಳ ಬದಲಾವಣೆಗೆ ನಿರ್ಧರಿಸಲಾಗಿದೆ. (ದಿಗ್ವಿಜಯ ನ್ಯೂಸ್)

One Reply to “ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ವಿಸರ್ಜನೆಗೆ ಆದೇಶಿಸಿದ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ”

  1. ಊರೆಲ್ಲಾ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರಂತೆ

Leave a Reply

Your email address will not be published. Required fields are marked *