More

    ಗೃಹಲಕ್ಷ್ಮಿ ಹಣದಲ್ಲಿ ಯುಗಾದಿ ಹಬ್ಬದಂದೇ ಫ್ರಿಜ್​ ಖರೀದಿಸಿದ ಮಹಿಳೆ ; ಡಿಸಿಎಂ ಡಿ.ಕೆ ಶಿವಕುಮಾರ್ ಮೆಚ್ಚುಗೆ

    ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಉಚಿತ ಗ್ಯಾರಂಟಿ ಯೋಜನೆಯಡಿ ಪ್ರತಿ ತಿಂಗಳು ಬರುವ 2000 ರೂ. ಹಣವನ್ನು ಕೂಡಿಟ್ಟು ಹಾವೇರಿ ಜಿಲ್ಲೆಯ ಶಿಗ್ಗಾಂವಿ ನಿವಾಸಿ ಲತಾ ಎಂಬವರು ಫ್ರಿಡ್ಜ್ ಖರೀದಿಸಿದ್ದಾರೆ.

    ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಬಡಮಹಿಳೆಯ ಕನಸು ನನಸು ಮಾಡಿದೆ. ಗೃಹಲಕ್ಷ್ಮಿ ಯೋಜನೆಯಿಂದ ತಿಂಗಳಿಗೆ ಬರುವ 2 ಸಾವಿರ ರೂಪಾಯಿ ಹಾವೇರಿಯ ಮಹಿಳೆಗೆ ವರದಾನವಾಗಿದ್ದು, ಮನೆಗೆ ಫ್ರಿಜ್‌ ಖರೀದಿ ಮಾಡಿದ್ದಾರೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಹೊಸ ಫ್ರಿಜ್ ಖರೀದಿ ಮಾಡಿರೋ ಮುತ್ತವ್ವ ಮನೆಯಲ್ಲಿ ಪೂಜೆ ಕೂಡ ಸಲ್ಲಿಸಿದ್ದಾರೆ.

    ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಮುತ್ತವ್ವ ಎಂಬ ಮಹಿಳೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಹಣ ಸಂಗ್ರಹಿಸಿದ್ದರು. ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮನೆಗೆ ಫ್ರಿಜ್ ಖರೀದಿ ಮಾಡಿರುವುದಾಗಿ ಹೇಳಿದ್ದಾರೆ. ಮುತ್ತವ್ವ ಒಟ್ಟು 17,500 ರೂಪಾಯಿಗೆ ಹೊಸ ಫ್ರಿಜ್ ಖರೀದಿ ಮಾಡಿದ್ದಾರೆ.
    ಗೃಹಲಕ್ಷ್ಮಿ ಯೋಜನೆಯ ಹಣದಿಂದ ಫ್ರಿಜ್ ಖರೀದಿ ಮಾಡಿರುವುದಕ್ಕೆ ಫ್ರಿಜ್ ಮೇಲೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಅನ್ನೋ ಬೋರ್ಡ್‌ ಕೂಡ ಅಂಟಿಸಿದ್ದಾರೆ.

    ‘ಹಾವೇರಿಯ ಮಹಿಳೆಯೊಬ್ಬರು ಗೃಹಲಕ್ಷ್ಮಿ ಗ್ಯಾರಂಟಿಯ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಸುದ್ದಿ ತಿಳಿದು ಮನಸ್ಸಿನಲ್ಲಿ ಒಂದು ಸಾರ್ಥಕತೆಯ ಭಾವ ಮೂಡಿದೆ. ರಾಜಕೀಯ ಮಾಡಲೆಂದೇ ಎಷ್ಟೋ‌ ಜನ ಕಾಂಗ್ರೆಸ್ ಗ್ಯಾರಂಟಿಗಳ‌ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರು. ನಾವು ಬಡವರ ಮೇಲೆ ರಾಜಕೀಯ ಮಾಡಲ್ಲ, ಬಡವರ ಬದುಕು ಕಟ್ಟುವ ಕೆಲಸ ಮಾಡುತ್ತಿದ್ದೇವೆ. ಅವರ ಬದುಕಿನ ಗುಣಮಟ್ಟ ಹೆಚ್ಚಿಸಿದ ಸಾರ್ಥಕತೆ ಸಾಕು ನಮಗೆ’ ಎಂದು ಡಿಕೆ ಶಿವಕುಮಾರ್ ಎಕ್ಸ್​ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

    ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಐದು ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಪ್ರತಿ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆ ಸಹ ಒಂದಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts