ಅವಹೇಳನಕಾರಿ ಪೋಸ್ಟ್; ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದೂರು ದಾಖಲು

amit malviya
Published on

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್​ನ ರಮೇಶ್ ಬಾಬು ದೂರು ನೀಡಿದ್ದಾರೆ.

ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್​ಗಳ ಹಿನ್ನೆಲೆ ರಮೇಶ್ ಬಾಬು ದೂರು ನೀಡಿದ್ದಾರೆ. ಆ್ಯನಿಮೇಟೆಡ್ ವೀಡಿಯೋ ಒಂದರಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆ ಬಿಜೆಪಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಲತಾಣಗಳ ಮೇಲೆ ಸರ್ಕಾರದ ಹದ್ದಿನ ಕಣ್ಣು

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರ, ಮುಖ್ಯಮಂತ್ರಿ, ಮಂತ್ರಿಗಳು, ಕಾಂಗ್ರೆಸ್ ನಾಯಕ ವಿರುದ್ಧ ಸುಳ್ಳು ಮಾಹಿತಿ, ತಿರುಚಿದ ಫೋಟೋಗಳನ್ನು ಹಾಕುವವರ ಹೆಡೆಮುರಿ ಕಟ್ಟಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅಪಪ್ರಚಾರ ಮಾಡುವ ಹಾಗೂ ತಿರುಚಿದ ಫೋಟೋಗಳ ಮೂಲಕ ವಿಕೃತಿಯನ್ನುಂಟು ಮಾಡುವವರ ಸಂಖ್ಯೆಯನ್ನು ನಿಯಂತ್ರಿಸುವುದಕ್ಕಾಗಿ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಸಾಮಾಜಿನ ಜಾಲತಾಣಗಳ ಮೇಲೆ ನಿಗಾ ಇರಿಸುವಂತೆ ಸೈಬರ್ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಪೊಲೀಸ್ ಇಲಾಖೆಗೆ ಖಡಕ್ ಸೂಚನೆ

ಕಾಂಗ್ರೆಸ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸರ್ಕಾರ ರಚನೆ ಮಾಡಿದ ನಂತರ ಸಾಮಾಜಿಕ ಜಾಲತಾಣದ ದುರ್ಬಳಕೆ ಹೆಚ್ಚುತ್ತಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಪ್ರಕಾರ, ಆಕ್ಷೇಪಾರ್ಹ ಮತ್ತು ಆಧಾರ ರಹಿತ ಟೀಕೆ, ಹೇಳಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶವಿದೆ. ಇದೇ ನಿಯಮ ಆಧರಿಸಿ ಇಂತಹ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.

ಪ್ರತ್ಯೇಕ ಇನ್ಸ್​​ಪೆಕ್ಟರ್ ನೇಮಕ

ಸಿಐಡಿಯಲ್ಲಿರುವ ಸೈಬರ್ ವಿಭಾಗದಲ್ಲಿ ಪ್ರತ್ಯೇಕ ಇನ್ಸ್‌ಪೆಕ್ಟರ್ ಒಬ್ಬರನ್ನು ನೇಮಕ ಮಾಡಲಾಗುತ್ತದೆ. ಅವರು ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳನ್ನು ಗಮನಿಸಿ, ಸರ್ಕಾರದ ವಿರುದ್ಧ ಇರುವ ಪೋಸ್ಟ್‌ಗಳನ್ನು ಗಮನಿಸಬೇಕು. ಅವುಗಳ ಸೃಷ್ಟಿಕರ್ತರು, ಎಲ್ಲಿಂದ ಪೋಸ್ಟ್ ಆಗಿವೆ ಎಂಬುದನ್ನು ದೃಢಪಡಿಸಿಕೊಂಡು ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳುವ ಜವಾಬ್ದಾರಿ ನೀಡಲಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net