More

    ಕೇಂದ್ರ ಬಜೆಟ್​ 2024| ಪ್ರತ್ಯೇಕ ರಾಷ್ಟ್ರದ ಬಗ್ಗೆ ಧ್ವನಿ ಎತ್ತಿದ ಸಂಸದ ಡಿ.ಕೆ. ಸುರೇಶ್​

    ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 01ರಂದು ಮಧ್ಯಂತರ ಬಜೆಟ್ ಮಂಡಿಸಿದ್ದುಇ ಪ್ರಮುಖ ಘೋಷಣೆಗಳನ್ನು ಮಾಡಿದ್ಧಾರೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್​ ಸಂಸದ ಡಿ.ಕೆ. ಸುರೇಶ್​ ಪ್ತತ್ಯೇಕ ರಾಷ್ಟ್ರದ ಕುರಿತು ಮಾತನಾಡುವ ಮೂಲಕ ಹೊಸ ವಿವಾದ ಒಂದನ್ನು ಹುಟ್ಟುಹಾಕಿದ್ದಾರೆ.

    ಈ ಕುರಿತು ಮಾತನಾಡಿದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್​, ಕೇಂದ್ರ ಸರ್ಕಾರ ಮತ್ತೊಮ್ಮೆ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದವರು ಈಗ ಅದರ ಹೆಸರಿನಲ್ಲಿ ಚುನಾವಣೆ ಎದುರಿಸಲು ಹೊರಟ್ಟಿದ್ದಾರೆ.

    ಇದನ್ನೂ ಓದಿ: ಪಾದಯಾತ್ರೆ ಮೂಲಕ ಅಯೋಧ್ಯೆಗೆ ತೆರಳಿ ಬಾಲರಾಮನಿಗೆ ಭಕ್ತಿ ಸಮರ್ಪಿಸಿದ 350 ಮುಸ್ಲಿಮರು

    ದಕ್ಷಿಣ ಭಾರತದಿಂದ ಸಂಗ್ರಹವಾಗುವ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ಹರಿದು ಹಂಚಿ ಹೋಗುತ್ತಿದೆ. ದಕ್ಷಿಣ ಭಾರತಕ್ಕೆ ಅನ್ಯಾಯವಾಗುತ್ತಿದ್ದು, ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರೆದಲ್ಲಿ ಪ್ರತ್ಯೇಕ ರಾಷ್ಟ್ರದ ಕೂಗು ಉದ್ಭವಿಸುತ್ತದೆ. ಹೊಸ ಪದಗಳನ್ನು ಬಳಸಿ ಘೋಷಣೆಗಳನ್ನು ಮಾಡಲಾಗಿದೆ. ಉಳಿದಂತೆ ಬಜೆಟ್​ನಲ್ಲಿ ಹೊರತನ್ನು ಏನು ನಿರೀಕ್ಷಿಸುವಂತಿಲ್ಲ ಎಂದು ಕಿಡಿಕಾರಿದ್ದಾರೆ.

    ನಮಗೆ ಬರಬೇಕಾಗಿರುವ ಬಾಕಿ ಹಣವೇ ಸರಿಯಾಗಿ ಬರುತ್ತಿಲ್ಲ. ಇನ್ನು 75 ಸಾವಿರ ಕೋಟಿ ರೂ. ಬಡ್ಡಿ ರಹಿತ ಸಾಲ ನೀಡುವುದಾಗಿ ಘೋಷಿಸಿದ್ದಾರೆ. ಈ ಬಜೆಟ್​ನಲ್ಲಿ ನಾಮಫಲಕವನ್ನು ಮಾತ್ರ ಬದಲಾಯಿಸಲಾಗಿದೆ. ದೇಸಿ ಹೆಸರುಗಳನ್ನ ಇಡಲಾಗಿದೆ.   ಚುನಾವಣೆಗೆ ಸಂಬಂಧಪಟ್ಟಂತೆ ಒಂದಷ್ಟು ಘೋಷಣೆಗಳು, ಒಂದಷ್ಟು ಹೇಳಿಕೆಗಳನ್ನು ಕೂಡಿರುವ ಬಜೆಟ್‌ ಇದಾಗಿದೆ ಎಂದು ಸಂಸದ ಡಿ.ಕೆ. ಸುರೇಶ್​ ಆರೋಪಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts