More

    VIDEO | ಮೊದಲ ಅಧಿವೇಶನ ಆರಂಭಕ್ಕೂ ಮುನ್ನ ಗೋಮೂತ್ರ ಸಿಂಪಡಿಸಿ ಶುದ್ಧೀಕರಿಸಿದ ಕಾಂಗ್ರೆಸ್ ಕಾರ್ಯಕರ್ತರು!

    ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದೆ. ಮೊದಲ ಎರಡು ದಿನ 224 ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿಲಿದ್ದು, ಪ್ರಕ್ರಿಯೆ ಆರಂಭವಾಗಿದೆ. ಹಂಗಾಮಿ ಸ್ವೀಕರ್ ಆಗಿರುವ ಆರ್​.ವಿ.ದೇಶಪಾಂಡೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

    16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭಕ್ಕೂ ಮುನ್ನ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸೌಧದ ಪೂರ್ವ ಭಾಗದ ಕಾಂಪೌಂಡ್ ಬಳಿ ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದ್ದಾರೆ. ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತ ಕೊನೆಗೊಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧವನ್ನು ಶುದ್ಧೀಕರಿಸುತ್ತಿದ್ದೇವೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳಿಕೊಂಡಿದ್ದಾರೆ.

    ಇದನ್ನೂ ಓದಿ: ಏನೇ ಆದ್ರೂ ಆರ್​ಸಿಬಿ ನನ್ನ ಫೇವರಿಟ್… ಕಪ್ ಗೆಲ್ಲುವ ಸಮಯ ಬಂದೇ ಬರುತ್ತದೆ: ಡಿಕೆಶಿ

    ಡಿಕೆಶಿ ಹೆಸರಿನಲ್ಲಿ ಪ್ರಮಾಣವಚನ

    ಚನ್ನಗಿರಿ ಶಾಸಕ ಶಾಸಕ ಬಸವರಾಜ್ ಶಿವಗಂಗಾ ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣ ಸ್ವೀಕಾರ ಮಾಡಿದ್ದರು. ಇದಕ್ಕೆ ಸದನದಲ್ಲಿ ಇತರೆ ಸದನದ ಸದಸ್ಯರಿಂದ ಆಕ್ಷೇಪ ವ್ಯಕ್ತವಾಯಿತು. ಕೂಡಲೆ ಗೊಂದಲ ಬಗೆಹರಿಸಿದ ಸ್ಪೀಕರ್, ವ್ಯಕ್ತಿ ಹೆಸರಿನ ಮೇಲೆ ಪ್ರಮಾಣ ಮಾಡಿಸದಂತೆ ವಿಧಾನಸಭೆ ಕಾರ್ಯದರ್ಶಿಗೆ ಸೂಚನೆ ನೀಡಿದರು.

    ಇದನ್ನೂ ಓದಿ: ವಾಹನ ಸವಾರರ ತೊಂದರೆ ಕಂಡು ಝೀರೋ ಟ್ರಾಫಿಕ್ ಸೌಲಭ್ಯ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

    ಹಂಗಾಮಿ ಸ್ಪೀಕರ್ ಆಗಿ ಆರ್​.ವಿ.ದೇಶಪಾಂಡೆ

    ಸಭಾಧ್ಯಕ್ಷರು ಆಯ್ಕೆಯಾಗುವವರೆಗೆ ಆರ್​.ವಿ.ದೇಶಪಾಂಡೆ ಅವರು ಹಂಗಾಮಿ ಸ್ಪೀಕರ್ ಆಗಿ ನೇಮಕವಾಗಿದ್ದು, ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಮೊದಲಿಗೆ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಸಿದ್ದಾರೆ. ಕನಕಪುರ ಕ್ಷೇತ್ರದ ಶಾಸಕ, ಡಿಸಿಎಂ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts