More

    ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ- ಒಂದು ದಿನದಲ್ಲಿ 10 ಪ್ರಕರಣ: 418ಕ್ಕೇರಿದ ಸೋಂಕಿತರ ಸಂಖ್ಯೆ: ನಿಮ್ಮ ಜಿಲ್ಲೆಯಲ್ಲಿ ಎಷ್ಟು?

    ಬೆಂಗಳೂರು: ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ನಿನ್ನೆ ಸಂಜೆ 5 ಗಂಟೆಯಿಂದ 24 ಗಂಟೆಗಳ ಅವಧಿಯಲ್ಲಿ 10 ಹೊಸ ಪ್ರಕರಣಗಳು ಪತ್ತೆಯಾಗಿವೆ.
    ಕಲಬುರಗಿಯಲ್ಲಿ 3, ವಿಜಯಪುರದಲ್ಲಿ 3, ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ 2 ಹಾಗೂ ಬೆಳಗಾವಿಯಲ್ಲಿ ಒಂದು ಹೊಸ ಪ್ರಕರಣ ಪತ್ತೆಯಾಗಿದೆ.
    ಇಲ್ಲಿಯವರೆಗೆ ಕರೊನಾ ಸೋಂಕಿತರ ಸಂಖ್ಯೆ 418 ಆಗಿದ್ದು, ಈ ಪೈಕಿ 129 ಮಂದಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. 17 ಮಂದಿ ಮೃತಪಟ್ಟಿದ್ದರೆ. ಒಬ್ಬ ಗರ್ಭಿಣಿ ಸೇರಿದಂತೆ 267 ಮಂದಿ ಸಾಮಾನ್ಯ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, 5 ಮಂದಿ ಐಸಿಯುನಲ್ಲಿ ಇದ್ದಾರೆ.

    ನಿಮ್ಮ ಜಿಲ್ಲೆಯಲ್ಲಿ ಎಷ್ಟು?:
    ಇಲ್ಲಿಯವರೆಗೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು ಪತ್ತೆಯಾಗಿದ್ದು, ಎಷ್ಟು ಬಿಡುಗಡೆಯಾಗಿವೆ, ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬುದು ಇಲ್ಲಿ ಉಲ್ಲೇಖಗೊಂಡಿದೆ. ಇಲ್ಲಿ ಹೆಸರು ಇಲ್ಲದಿರುವ ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳು ವರದಿಯಾಗಿಲ್ಲ.

    ಬೆಂಗಳೂರು ನಗರ: 89 ಮಂದಿಗೆ ಸೋಂಕು ತಗುಲಿದ್ದು, 48 ಮಂದಿ ಬಿಡುಗಡೆಯಾಗಿದ್ದಾರೆ. ಇದುವರೆಗೆ ನಾಲ್ಕು ಮಂದಿ ಮೃತಪಟ್ಟಿದ್ದು, 37 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಮೈಸೂರು: 86 ಮಂದಿ ಸೋಂಕಿತರಾಗಿದ್ದು 31 ಮಂದಿ ಬಿಡುಗಡೆಯಾಗಿದ್ದಾರೆ. 55 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಬೆಳಗಾವಿ: 43 ಮಂದಿ ಸೋಂಕಿತರಾಗಿದ್ದು ಒಬ್ಬರು ಮೃತಪಟ್ಟಿದ್ದಾರೆ. 3 ಮಂದಿ ಬಿಡುಗಡೆಯಾಗಿದ್ದು, 39 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ವಿಜಯಪುರ: 35 ಮಂದಿ ಸೋಂಕುಪೀಡಿತರಾಗಿದ್ದು, ಇಬ್ಬರು ಮೃತಪಟ್ಟಿದ್ದು 33 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಕಲಬುರಗಿ: 30 ಮಂದಿ ಸೋಂಕಿತರಾಗಿದ್ದು ಮೂವರು ಬಿಡುಗಡೆ ಹೊಂದಿದ್ದು ನಾಲ್ಕು ಮಂದಿ ಮೃತಪಟ್ಟಿದ್ದಾರೆ. 23 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಬಾಗಲಕೋಟೆ: 21 ಸೋಂಕು ಪ್ರಕರಣವಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇಬ್ಬರು ಬಿಡುಗಡೆಯಾಗಿದ್ದು, 18 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಚಿಕ್ಕಬಳ್ಳಾಪುರ: 16 ಮಂದಿ ಸೋಂಕು ಪೀಡಿತರಾಗಿದ್ದು 9 ಮಂದಿ ಬಿಡುಗಡೆಯಾಗಿದ್ದರೆ ಇಬ್ಬರು ಮೃತಪಟ್ಟಿದ್ದಾರೆ. 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಬೀದರ್‌: 15 ಮಂದಿ ಸೋಂಕಿತರಾಗಿದ್ದು ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
    ದಕ್ಷಿಣ ಕನ್ನಡ: 15 ಮಂದಿ ಸೋಂಕಿತರು ಪತ್ತೆಯಾಗಿದ್ದು 11 ಮಂದಿ ಬಿಡುಗಡೆ ಹೊಂದಿದ್ದಾರೆ. ಒಬ್ಬರು ಮೃತಪಟ್ಟಿದ್ದು 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಬಳ್ಳಾರಿ: 13 ಮಂದಿ ಸೋಂಕಿತರಾಗಿದ್ದು ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಬೆಂಗಳೂರು ಗ್ರಾಮಾಂತರ: 12 ಮಂದಿ ಸೋಂಕಿತರಿದ್ದು, ನಾಲ್ವರು ಬಿಡುಗಡೆಯಾಗಿದ್ದಾರೆ, 8 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಮಂಡ್ಯ: 12 ಮಂದಿ ಸೋಂಕಿತರಿದ್ದು, ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಉತ್ತರ ಕನ್ನಡ: 11 ಮಂದಿಗೆ ಸೋಂಕು ತಗುಲಿದ್ದು 9 ಮಂದಿ ಬಿಡುಗಡೆಯಾಗಿದ್ದಾರೆ. ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.
    ಧಾರವಾಡ: 7 ಮಂದಿಗೆ ಸೋಂಕು ತಗುಲಿದ್ದು ಒಬ್ಬರು ಬಿಡುಗಡೆಯಾಗಿದ್ದಾರೆ. 6 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಗದಗ: ನಾಲ್ಕು ಮಂದಿಗೆ ಸೋಂಕು ತಗುಲಿದ್ದು ಒಬ್ಬರು ಮೃತಪಟ್ಟಿದ್ದಾರೆ. 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಉಡುಪಿ: ಮೂವರಿಗೆ ಸೋಂಕು ತಗುಲಿದ್ದು ಎಲ್ಲರೂ ಬಿಡುಗಡೆಯಾಗಿದ್ದಾರೆ.
    ದಾವಣಗೆರೆ: ಇಬ್ಬರಿಗೆ ಸೋಂಕು ತಗುಲಿದ್ದು ಎಲ್ಲರೂ ಬಿಡುಗಡೆಯಾಗಿದ್ದಾರೆ.
    ತುಮಕೂರು: ಇಬ್ಬರಿಗೆ ಸೋಂಕು ತಗುಲಿದ್ದು ಒಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರು ಬಿಡುಗಡೆಯಾಗಿದ್ದಾರೆ.
    ಚಿತ್ರದುರ್ಗ: ಒಬ್ಬರಿಗೆ ಸೋಂಕು ತಗುಲಿದ್ದು, ಬಿಡುಗಡೆಯಾಗಿದ್ದಾರೆ.
    ಕೊಡಗು: ಒಬ್ಬರಿಗೆ ಸೋಂಕು ತಗುಲಿದ್ದು, ಬಿಡುಗಡೆಯಾಗಿದ್ದಾರೆ.

    ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.

    ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts