ರಾಜ್ಯದಲ್ಲಿಂದು 1,531 ಕರೊನಾ ಕೇಸ್; 19 ಜಿಲ್ಲೆಗಳಲ್ಲಿ ಮರಣ ಪ್ರಕರಣ 'ಶೂನ್ಯ'

covid
Published on

ಬೆಂಗಳೂರು: ರಾಜ್ಯದಲ್ಲಿಂದು 1,531 ಜನರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 28,99,195ಕ್ಕೆ ಏರಿಕೆಯಾಗಿದೆ. ಇಂದು 19 ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 36,456ಕ್ಕೆ ಹೆಚ್ಚಿದೆ.

24 ಗಂಟೆಗಳಲ್ಲಿ 1,430 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ಗುಣಮುಖರ ಸಂಖ್ಯೆ 28,40,147ಕ್ಕೆ ಏರಿದೆ. ಸದ್ಯ 22,569 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಇಂದಿನ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ. 1.03ರಷ್ಟಿದ್ದರೆ, ಮರಣ ಪ್ರಮಾಣ ಶೇ. 1.24ರಷ್ಟಿದೆ.

ಬೆಂಗಳೂರಿನಲ್ಲಿ ಬುಧವಾರ 376 ಪ್ರಕರಣ ದೃಢವಾಗಿದೆ. ಉಳಿದಂತೆ ದಕ್ಷಿಣ ಕನ್ನಡದಲ್ಲಿ 337, ಉಡುಪಿಯಲ್ಲಿ 109ಪ್ರಕರಣಗಳು ಕಾಣಿಸಿಕೊಂಡಿವೆ. ಕೊಪ್ಪಳ, ಗದಗ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ರಾಜ್ಯದ 19 ಜಿಲ್ಲೆಗಳಲ್ಲಿ ಒಂದೂ ಸಾವು ವರದಿಯಾಗಿಲ್ಲ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net