ಬೆಂಗಳೂರು: ಕರ್ನಾಟಕದಲ್ಲಿ ಬಹುತೇಕ ಕಡಿಮೆಯಾಗಿದ್ದ ಕರೊನಾ ಸೋಂಕು ಮತ್ತೆ ಏರಲಾರಂಭಿಸಿದೆ. ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 1987 ಮಂದಿಯಲ್ಲಿ ಸೋಂಕು ದೃಢವಾಗಿದೆ. ಸತತ ಮೂರು ದಿನಗಳಿಂದ ಸೋಂಕಿನ ಪ್ರಮಾಣ ಹೆಚ್ಚಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಇದೀಗ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 29,05,124ಕ್ಕೆ ಏರಿಕೆಯಾಗಿದೆ. ಇಂದು 1,632 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ಗುಣಮುಖರ ಸಂಖ್ಯೆ 28,44,742ಕ್ಕೆ ಏರಿದ್ದರೆ 23,796 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಇಂದು 37 ಸೋಂಕಿತರು ಕೊನೆಯುಸಿರೆಳೆದಿದ್ದು, ಮೃತರ ಸಂಖ್ಯೆ 36,562ಕ್ಕೆ ಏರಿಕೆಯಾಗಿದೆ. ಇಂದಿನ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ. 1.43ರಷ್ಟಿದ್ದರೆ ಮರಣ ಪ್ರಮಾಣ ಶೇ. 1.86ರಷ್ಟಿದೆ.
ಇಂದಿನ 31/07/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/IWJKBL3NAF@CMofKarnataka @BSBommai @Comm_dhfwka @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/Yut4Mbi3O2
— K'taka Health Dept (@DHFWKA) July 31, 2021
ಇಂದು ಬೆಂಗಳೂರಿನಲ್ಲಿ 450, ದಕ್ಷಿಣ ಕನ್ನಡದಲ್ಲಿ 365, ಮೈಸೂರಿನಲ್ಲಿ 177, ಉಡುಪಿ 148, ಕೊಡಗು 132, ತುಮಕೂರು 108 ಹಾಗೂ ಹಾಸನದಲ್ಲಿ 105 ಪ್ರಕರಣಗಳು ದೃಢವಾಗಿವೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು 11 ಮಂದಿ ಸಾವನ್ನಪ್ಪಿದ್ದು, ಜಿಲ್ಲೆಯ ಮೃತರ ಸಂಖ್ಯೆ 15,872ಕ್ಕೆ ಹೆಚ್ಚಿದೆ. ಸದ್ಯ ಜಿಲ್ಲೆಯಲ್ಲಿ 8529 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. (ಏಜೆನ್ಸೀಸ್)
ವರ್ಗಾವಣೆ ಗೊಂದಲಗಳಿಗೆ ಮಾಸ್ಟರ್ ಫೈಲ್ ಪರಿಹಾರ; ಅಧಿಕಾರಿಗಳಿಗೆ ಸೂಚನೆ ನೀಡಿದ ಆಯುಕ್ತರು
ಬಿಗ್ಬಾಸ್ನಲ್ಲಿ ಇಂದೇ ಎಲಿಮಿನೇಶನ್! ಮನೆಯಿಂದ ಹೊರಬಂದವರು ಇವರೇ ನೋಡಿ..