More

  ಸುದೀಪ್​ ವಿರುದ್ಧ ಆರೋಪ ಮಾಡಿದ್ದ ನಿರ್ಮಾಪಕ ಸುರೇಶ್‌ಗೆ ಹಿನ್ನಡೆ; ಕೇಸ್ ರದ್ದತಿಗೆ ಕೋರ್ಟ್ ನಕಾರ

  ಬೆಂಗಳೂರು: ನಟ ಕಿಚ್ಚ ಸುದೀಪ್​ ಬಗ್ಗೆ ಈ ಹಿಂದೆ ಸುಳ್ಳು ಆಸ್ತಿ ಸಂಪಾದನೆ, ವಂಚನೆ ಆರೋಪ ಮಾಡಿದ್ದ ಚಲನಚಿತ್ರ ನಿರ್ಮಾಪಕರ ಸಂಘದ ಪದಾಧಿಕಾರಿ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯದರ್ಶಿ ಎನ್.ಎಂ. ಸುರೇಶ್ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

  ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿಯಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಕೋರಿ ಸುರೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ, ಪೀಠವು ಸುದೀಪ್ ಅವರ ವಿರುದ್ಧ ಮಾನಹಾನಿಕರ ಮತ್ತು ಸಮಾಜದಲ್ಲಿ ಅವರ ಹೆಸರನ್ನು ಕೆಡಿಸುವಂತಹ ಆರೋಪದ ಪ್ರಕರಣವನ್ನು ದಾಖಲಿಸಲಾಗಿದೆ. ಸಮನ್ಸ್ ಜಾರಿ ಮಾಡುವ ಕ್ರಮದಲ್ಲಿ ಯಾವುದೇ ಅಕ್ರಮ ಕಂಡು ಬಂದಿಲ್ಲ. ಹಾಗಾಗಿ ಪ್ರಕರಣದ ವಿಚಾರಣೆಯನ್ನು ರದ್ದು ಮಾಡಲಾಗದು ಎಂದು ಅಭಿಪ್ರಾಯಪಟ್ಟಿದ್ದಾರೆ.

  Sudeep MN Kumar

  ಇದನ್ನೂ ಓದಿ: ರಾಮಕೃಷ್ಣ ಮಿಷನ್‌ನ ಸ್ವಾಮಿ ಸ್ಮರಣಾನಂದ ಮಹಾರಾಜ್ ನಿಧನ; ಪ್ರಧಾನಿ ಸೇರಿ ಕಂಬನಿ ಮಿಡಿದ ಗಣ್ಯರು

  9 ಕೋಟಿ ರೂಪಾಯಿ ಅಡ್ವಾನ್ಸ್ ಪಡೆದುಕೊಂಡು ಸಿನಿಮಾಗೆ ಡೇಟ್ಸ್ ಕೊಡದೇ ವಂಚನೆ ಮಾಡಿದ್ದಾರೆಂದು ಕಿಚ್ಚ ಸುದೀಪ್ ವಿರುದ್ಧ ನಿರ್ಮಾಪಕರಾದ ಎಂ.ಎನ್. ಕುಮಾರ್ ಹಾಗೂ ಎನ್​.ಎಂ. ಸುರೇಶ್ ಆರೋಪ ಮಾಡಿದ್ದರು. ಈ ಪ್ರಕರಣ ಸಂಬಂಧ ಸುದೀಪ್ ಕೋರ್ಟ್‌ ಮೆಟ್ಟಿಲೇರಿ ಮಾನನಷ್ಟ ಮೊಕದ್ದೊಮೆ ದಾಖಲಿಸಿದ್ದರು.

  ಎಂ.ಎನ್. ಕುಮಾರ್  ಮಾಡಿರುವ ಆರೋಪಗಳಿಗೆ ಸೂಕ್ತ ದಾಖಲೆ ನೀಡಬೇಕು, ಇಲ್ಲವೇ ಸುಳ್ಳು ಆರೋಪ ಮಾಡಿದ್ದಕ್ಕೆ ಬಹಿರಂಗ ಕ್ಷಮೆ ಕೇಳಬೇಕು ಎಂದು ಸುದೀಪ್ 10 ದಿನ ಗಡುವು ನೀಡಿದ್ದರು. ಆದರೆ ಅದಕ್ಕೆ ಯಾವುದೇ ಉತ್ತರ ನೀಡದ ಹಿನ್ನೆಲೆ ಸುದೀಪ್ ಮಾನನಷ್ಟ ಮೊಕದ್ದಮೆ ದಾಖಲಿಸಿ ಕಾನೂನು ಸಮರ ಸಾರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts