More

    ಸನಾತನ ಧರ್ಮದ ಕುರಿತು ಹೇಳಿಕೆ; ಸಚಿವ ಉದಯನಿಧಿ ಸ್ಟಾಲಿನ್​ಗೆ ಕರ್ನಾಟಕ ಕೋರ್ಟ್​ ಸಮನ್ಸ್​

    ಬೆಂಗಳೂರು: ಕಳೆದ ವರ್ಷ ಸನಾತನ ಧರ್ಮಸನಾತನ ಧರ್ಮ ಡೆಂಗ್ಯೂ ಹಾಗೂ ಮಲೇರಿಯಾ ಇದ್ದಂತೆ ಅದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿ ತೀವ್ರ ವಿವಾದಕ್ಕೀಡಾಗಿದ್ದ ತಮಿಳುನಾಡು ಸಿಎಂ ಸ್ಟಾಲಿನ್​ ಪುತ್ರ, ಸಚಿವ ಉದಯನಿಧಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಕೋರ್ಟ್​ ಸಮನ್ಸ್​ ಜಾರಿ ಮಾಡಿದೆ.

    ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್​ ವಿರುದ್ಧ ದೇಶಾದ್ಯಂತ ಪ್ರಕರಣಗಳು ದಾಖಲಾಗಿದ್ದವು. ಅದರಂತೆ ಬೆಂಗಳೂರಿನಲ್ಲೂ ಉದಯನಿಧಿ ಸ್ಟಾಲಿನ್​ ವಿರುದ್ಧ ದೂರು ದಾಖಲಾಗಿತ್ತು. ಅದರಂತೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಲಯ ಉದಯನಿಧಿ ಸ್ಟ್ಯಾಲಿನ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ.

    ಇದನ್ನೂ ಓದಿ: ಬಾಕ್ಸ್​ ಪ್ಯಾಕ್​ ಮಾಡುವಾಗಲೇ ಕುಸಿದು ಬಿದ್ದು ಯುವಕ ಸಾವು; ವೈದ್ಯರು ಹೇಳಿದ್ದಿಷ್ಟು

    ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪರಮೇಶ್​ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು. ಅದರಂತೆ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ  42 ನೇ ಎಸಿಎಂಎಂ ನ್ಯಾಯಾಲಯ ಮಾರ್ಚ್​ 04ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿ ಮಾಡಿದೆ.

    ನಾನು ಮಾತನಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ, ನಾವು ಪ್ರಕರಣವನ್ನು ಕಾನೂನಾತ್ಮಕವಾಗಿ ಎದುರಿಸುತ್ತೇವೆ. ನಾನು ನನ್ನ ನಿಲುವನ್ನು ಬದಲಾಯಿಸುವುದಿಲ್ಲ. ನಾನು ನನ್ನ ಸಿದ್ಧಾಂತದ ಬಗ್ಗೆ ಮಾತ್ರ ಮಾತನಾಡಿದ್ದೇನೆ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts