More

    ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಹಾಳಾಗಿದೆ, ಸಿಎಂ ಎಷ್ಟು ದಿನ ರಾಜ್ಯಭಾರ ನಡೆಸ್ತಾರೋ ಗೊತ್ತಿಲ್ಲ: ಪ್ರಧಾನಿ ಮೋದಿ

    ಮಧ್ಯಪ್ರದೇಶ: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಹಾಳಾಗಿದ್ದು, ಸಿಎಂ ಸಿದ್ದರಾಮಯ್ಯ ಎಷ್ಟು ದಿನ ರಾಜ್ಯಭಾರ ನಡೆಸುತ್ತಾರೋ ಗೊತ್ತಿಲ್ಲ ಎಂಬುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಇಂದು ಮಧ್ಯಪ್ರದೇಶದ ಖಾಂಡ್ವದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಈ ವಿಷಯ ತಿಳಿಸಿದರು.

    ಕರ್ನಾಟಕದಲ್ಲಿ ಮುಖ್ಯಮಂತ್ರಿಯ ಮುಂದುವರಿಕೆ ಬಗ್ಗೆಯೇ ಗೊಂದಲಗಳು ಎದ್ದಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ. ಅಧಿಕಾರ ಹಿಡಿದಿರುವ ಕಾಂಗ್ರೆಸ್​ ಭ್ರಷ್ಟಾಚಾರದಲ್ಲಿ ಭಾಗಿಯಾದ್ದರಿಂದ ರಾಜ್ಯಕ್ಕೆ ಹಾನಿ ಉಂಟಾಗಿದೆ ಎಂದು ಪ್ರಧಾನಿ ಮೋದಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

    ಮಧ್ಯಪ್ರದೇಶದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಆರು ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್​ನತ್ತ ನೋಡಿ, ಅಲ್ಲಿನ ಸಿಎಂಗೆ ತಾನು ಎಷ್ಟು ದಿನ ರಾಜ್ಯಭಾರ ನಡೆಸುತ್ತೇನೆ ಎಂಬ ಬಗ್ಗೆಯೇ ಗೊತ್ತಿಲ್ಲ. ಅವರು ಕರ್ನಾಟಕದ ಬೆಳವಣಿಗೆ ಕುಂಠಿತಗೊಳಿಸಿ ರಾಜ್ಯವನ್ನು ಹಾಳುಗೆಡವಿದ್ದಾರೆ ಎಂದರು.

    ಇದನ್ನೂ ಓದಿ: ಯುವಕರೇಕೆ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ ಎಂದು ಅಚ್ಚರಿಯೇ?: 70 ಗಂಟೆ ಕೆಲಸ.. ಮೂರ್ತಿ ವರ್ಸಸ್ ಮೂರ್ತಿ…

    ರಾಜಸ್ಥಾನದ ಹಾಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಡಿಸಿಎಂ ಸಚಿನ್ ಪೈಲಟ್ ನಡುವಿನ ಸಂಘರ್ಷವನ್ನು ಪ್ರಸ್ತಾಪಿಸಿದ ಮೋದಿ, ಅಲ್ಲೂ ಎರಡು ಗುಂಪುಗಳ ನಡುವೆ ಒಳಜಗಳ ಉಂಟಾಗಿದೆ ಎಂದರು. ಹೀಗೆ ಜಗಳ ನಡೆಯುವುದು ಕಾಂಗ್ರೆಸ್ ಸಂಸ್ಕೃತಿ ಎಂದ ಮೋದಿ, ದೆಹಲಿಯಲ್ಲಿ ಕುಳಿತುಕೊಂಡಿರುವ ಅವರ ನ್ಯಾಯಾಧೀಶರು ತೀರ್ಪು ಕೊಡುತ್ತಾರೆ ಮತ್ತು ಅಂಗಡಿ ನಡೆಸುತ್ತಾರೆ ಎಂದು ಟೀಕಿಸಿದರು.

    ಎಲ್ಲೆಲ್ಲ ಕಾಂಗ್ರೆಸ್ ಅದೃಷ್ಟವಶಾತ್ ಅಧಿಕಾರ ಹಿಡಿದಿದೆಯೋ ಅಲ್ಲೆಲ್ಲ ಅದರ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಮಧ್ಯೆ ಲೂಟಿ ಮಾಡಲು ಪೈಪೋಟಿ ನಡೆದಿದೆ. ಅಂಥ ಸುದ್ದಿ ಕರ್ನಾಟಕದಿಂದ ಪದೇಪದೆ ಕೇಳಿಬರುತ್ತಿದೆ ಎಂದೂ ಮೋದಿ ಹೇಳಿದರು.

    ಇದನ್ನೂ ಓದಿ: 16 ದಿನ ಮನೆಯಲ್ಲಿ ಯಾರೂ ಇರಲಿಲ್ಲ, ಆದ್ರೂ ಬಂತು ಕರೆಂಟ್ ಬಿಲ್ ಮೂರುಪಟ್ಟು!

    ಸರ್ಕಾರ ರಚಿಸುವ ತಮ್ಮ ಕನಸು ನನಸಾಗದ್ದಕ್ಕೆ ಬಿಜೆಪಿ ಮತ್ತು ಜೆಡಿಎಸ್ ಹತಾಶಗೊಂಡಿದ್ದರಿಂದ ಮುಖ್ಯಮಂತ್ರಿ ಬದಲಾವಣೆ ಕುರಿತು ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದರು.

    ಆದರೆ ಕರ್ನಾಟಕದಲ್ಲಿ ಆ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ, ಸಿದ್ದರಾಮಯ್ಯ ಅವರ ಬಗ್ಗೆ ಕಾಂಗ್ರೆಸ್ ಪಕ್ಷದೊಳಗೆ ಪರ-ವಿರೋಧಗಳು ಇವೆ, ಈಗಿನ ಆಡಳಿತದ ಎರಡೂವರೆ ವರ್ಷಗಳ ನಂತರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಅವಕಾಶ ನೀಡಬೇಕಾಗಬಹುದು ಎಂದೂ ಮೋದಿ ಹೇಳಿದ್ದಾರೆ.

    ಇದನ್ನೂ ಓದಿ: ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!

    ರಾಜಸ್ಥಾನದಲ್ಲೂ ಸ್ಪಷ್ಟ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ನಲ್ಲಿ ಅಲ್ಲಿಯೂ ಎರಡು ಗುಂಪುಗಳ ಮಧ್ಯೆ ಕಳೆದ ನಾಲ್ಕೂವರೆ ವರ್ಷಗಳಿಂದ ದಿನವಿಡೀ ಸಂಘರ್ಷ ನಡೆಯುತ್ತಿದೆ. ಕಾಂಗ್ರೆಸ್ ಮಾಫಿಯಾರಾಜ್, ಭ್ರಷ್ಟಾಚಾರ ಮತ್ತು ಲೂಟಿಯನ್ನು ಪ್ರೋತ್ಸಾಹಿಸುತ್ತಿದೆ ಎಂದ ಮೋದಿ, ಮಧ್ಯಪ್ರದೇಶದ ಜನತೆ ಕಾಂಗ್ರೆಸ್​ ಅಧಿಕಾರದಲ್ಲಿರುವ ಇತರ ರಾಜ್ಯಗಳನ್ನು ನೋಡಿ ಅರ್ಥ ಮಾಡಿಕೊಳ್ಳಬೇಕು ಎಂದರು.

    ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ?

    ಮಕ್ಕಳ ಯಕ್ಷಗಾನವನ್ನು ನಿಲ್ಲಿಸಿದ ಪೊಲೀಸರು: ಕಾರಣ ಇದೇನಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts