More

    ಹೆದ್ದಾರಿ ಕಾಮಗಾರಿ ಮುಂದುವರಿಸಿ

    ಲಿಂಗಸುಗೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತೊಡಕಾದ ಕಟ್ಟಡಗಳನ್ನು ತೆರವುಗೊಳಿಸಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಪಟ್ಟಣದಲ್ಲಿ ಎಸಿ ಅವಿನಾಶ ಶಿಂಧೆಗೆ ಬುಧವಾರ ಮನವಿ ಸಲ್ಲಿಸಿದರು.

    ಕಳೆದ ಒಂದು ವರ್ಷದಿಂದ ಆರಂಭಗೊಂಡ ಕಾಮಗಾರಿಯಿಂದ ಬೀದಿ ಬದಿ ವ್ಯಾಪಾರಿಗಳು, ವಾಹನ ಸವಾರರು ನಿತ್ಯ ತೊಂದರೆ ಅನುಭವಿಸುವಂತಾಗಿದೆ. ಬೆಂಗಳೂರು ಬೈಪಾಸ್ ರಸ್ತೆಯಲ್ಲಿ ನಡೆದ ಹೆದ್ದಾರಿ ಕಾಮಗಾರಿಗೆ ಕೆಲ ಕಟ್ಟಡಗಳ ಮಾಲೀಕರು ತಡೆ ಉಂಟು ಮಾಡಿದ್ದಾರೆ. ಈ ಬಗ್ಗೆ ತಾಲೂಕು ಆಡಳಿತದ ಗಮನಕ್ಕಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ವಾಹನಗಳ ಸಂಚಾರ ದಟ್ಟಣೆ ಹೆಚ್ಚಿದ್ದು, ಕಿರಿದಾದ ಸರ್ವಿಸ್ ರಸ್ತೆಯಲ್ಲಿ ನಿತ್ಯ ಅಪಘಾತ ಸಂಭವಿಸುತ್ತಿವೆ. ಕೂಡಲೇ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

    ಪುರಸಭೆ ನಳಗಳ ಮೂಲಕ ಪೂರೈಸುವ ಕುಡಿಯುವ ನೀರು ಕಲುಷಿತವಾಗಿದ್ದು, ದುರ್ವಾಸನೆಯಿಂದ ಕೂಡಿದೆ. ಇಂತಹ ನೀರು ಸೇವನೆಯಿಂದ ಅನಾರೋಗ್ಯ ಸಮಸ್ಯೆಗಳು ಉಲ್ಬಣಿಸುತ್ತಿವೆ. ಕೂಡಲೇ ಅಧಿಕಾರಿಗಳು ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕಚೇರಿಗೆ ಬೀಗ ಹಾಕಲಾಗುವುದೆಂದು ಎಚ್ಚರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts