More

    ಚಿತ್ರಮಂದಿರಗಳ ಎಲ್ಲ ಆಸನ ಭರ್ತಿಗೆ ಅವಕಾಶ ನೀಡಿದ ಸರ್ಕಾರ: ಆದರೆ ಷರತ್ತುಗಳು ಅನ್ವಯ!

    ಬೆಂಗಳೂರು: ಚಿತ್ರರಂಗದ ನಿರ್ಮಾಪಕರು, ಕಲಾವಿದರು, ಕಾರ್ಮಿಕರ ಹಿತದೃಷ್ಟಿಯಿಂದ ನಾಲ್ಕು ವಾರಗಳವರೆಗೆ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ನೂರಕ್ಕೆ 100ರಷ್ಟು ಆಸನ ಭರ್ತಿಗೆ ಅವಕಾಶ ಮಾಡಿಕೊಡಲು ಸರ್ಕಾರ ತೀರ್ಮಾನಿಸಿದೆ.

    ವಿಧಾನಸೌಧದಲ್ಲಿ ಹಿರಿಯ ನಟರು, ಫಿಲಂ ಚೇಂಬರ್ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಕೇಂದ್ರ ಸರ್ಕಾರವು ಶೇ.100 ರಷ್ಟು ಭರ್ತಿ ಮಾಡಲು ಅವಕಾಶ ನೀಡಿದ್ದರೂ, ರಾಜ್ಯದ ಚಿತ್ರಮಂದಿರಗಳಲ್ಲಿ ಶೇ.50 ರಷ್ಟು ಮಾತ್ರ ಆಸನ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಆರೋಗ್ಯ ಇಲಾಖೆಯ ಈ ಮಾರ್ಗಸೂಚಿಯನ್ನು ಚಲನಚಿತ್ರ ರಂಗದವರು ವಿರೋಧಿಸಿದ್ದರು. ಕಾರ್ಮಿಕರು, ನಿರ್ಮಾಪಕರ ಹಿತದೃಷ್ಟಿಯಿಂದ ಹಾಗೂ ಚಿತ್ರರಂಗದ ಪರಿಸ್ಥಿತಿ ಶೋಚನೀಯವಾಗಿರುವುದರಿಂದ ನಿರ್ಧಾರ ಬದಲಿಸಬೇಕು ಎಂದು ಆಗ್ರಹಿಸಿದ್ದರು.

    ಮುಖ್ಯಮಂತ್ರಿಗಳ ಸೂಚನೆಯಂತೆ ನಾಲ್ಕು ವಾರಗಳವರೆಗೆ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿ ಮಾಡಲು ಅವಕಾಶ ನೀಡಲಾಗಿದೆ. ಆದರೆ ಇದಕ್ಕೆ ಕಠಿಣವಾದ ಮಾರ್ಗಸೂಚಿ ರೂಪಿಸಲಿದ್ದು, ನಾಳೆಯೇ ಅದನ್ನೂ ಬಿಡುಗಡೆ ಮಾಡಲಾಗುವುದು. ಇದನ್ನು ಚಿತ್ರಮಂದಿರಗಳ ಮಾಲೀಕರು ಅಳವಡಿಸಿಕೊಳ್ಳಬೇಕು. ಜನರು ಕೂಡ ಯಥಾವತ್ತಾಗಿ ಪಾಲಿಸಬೇಕು. ನಾಲ್ಕು ವಾರಗಳಲ್ಲಿ ಪ್ರೇಕ್ಷಕರಿಗೆ ಸೋಂಕು ತಗುಲುವ ಅಥವಾ ಕೋವಿಡ್ ಸೋಂಕು ಹೆಚ್ಚಿದ ಪ್ರಕರಣ ಕಂಡುಬಂದರೆ, ಮತ್ತೆ ನಿರ್ಧಾರ ಬದಲಿಸಿಕೊಳ್ಳುವ ಅನಿವಾರ್ಯ ಸ್ಥಿತಿ ಬರಲಿದೆ ಎಂದು ಸ್ಪಷ್ಟಪಡಿಸಿದರು.

    ಮದುವೆಯಾಗಲು ಹೆಣ್ಣಿಗೊಂದು ಗಂಡಿಗೊಂದು ವಯಸ್ಸೇಕೆ ? ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ವಕೀಲರು

    10ನೇ ತರಗತಿ ಪರೀಕ್ಷೆ ಬರೆಯಲಿದ್ದಾನೆ 11 ವರ್ಷದ ಪೋರ!

    ಸ್ಯಾನಿಟೈಸರ್​ನ್ನು ಗಟಗಟನೆ ಕುಡಿದ ಅಧಿಕಾರಿ; ಅಯ್ಯಯ್ಯೋ ಹಾಗೆ ಮಾಡಬೇಡಿ ಎಂದ ಸಹೋದ್ಯೋಗಿಗಳು

    ವರ್ಷವಾದರೂ ಕೋರ್ಟ್‌ಗೆ ಅಲೆಯುತ್ತಿದ್ದಾರೆ ಪಾಕ್ ಪರ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts