ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರಿನಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ.
ಹಾವೇರಿ ಜಿಲ್ಲೆಯ 6 ರಲ್ಲಿ 5 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಶಿಗ್ಗಾವಿಯಲ್ಲಿ ಮಾತ್ರ ಸಿಎಂ ಬೊಮ್ಮಾಯಿ ಅವರು ಮುನ್ನಡೆ ಸಾಧಿಸಿದ್ದಾರೆ. ಕಳೆದ ಬಾರಿ 5 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಒಂದು ಕಡೆ ಮಾತ್ರ ಗದ್ದಿತ್ತು. ಆದರೆ, ಈ ಬಾರಿ ಫಲಿತಾಂಶ ಉಲ್ಟಾ ಆಗುವ ಲಕ್ಷಣಗಳು ಕಾಣುತ್ತಿವೆ.
ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.
ಇದನ್ನೂ ಓದಿ: ಕರ್ನಾಟಕ ಚುನಾವಣಾ ಫಲಿತಾಂಶ: ಭಾರೀ ಮುನ್ನಡೆಯೊಂದಿಗೆ ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್
2018ರ ಫಲಿತಾಂಶ ಏನಿತ್ತು?
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.
LIVE| ಕರ್ನಾಟಕ ಚುನಾವಣಾ ಫಲಿತಾಂಶ 2023: ಕ್ಷಣ ಕ್ಷಣದ ಮಾಹಿತಿಗಾಗಿ ನೇರಪ್ರಸಾರ ವೀಕ್ಷಿಸಿ
ಕರ್ನಾಟಕ ಚುನಾವಣಾ ಫಲಿತಾಂಶ: ಹಾವೇರಿ ಜಿಲ್ಲೆಯ ಅಂಚೆ ಮತದಾನದಲ್ಲಿ ಯಾರು ಯಾರಿಗೆ ಮುನ್ನಡೆ?