More

    ಪೂರ್ಣ ಬಹುಮತ ಹಿನ್ನೆಲೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್​ ಭಾರೀ ಸಿದ್ಧತೆ

    ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ​ ಪೂರ್ಣ ಬಹುಮತ ಸಾಧಿಸಿದ ಹಿನ್ನೆಲೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್​ ಭಾರೀ ಸಿದ್ಧತೆ ನಡೆಸಿದೆ. ಅಪಾರ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಪ್ರಮಾಣವಚನಕ್ಕೆ ಸಿದ್ಧತೆ ನಡೆಯುತ್ತಿದೆ.

    ಈಗಾಗಲೇ ಪೊಲೀಸ್ ಇಲಾಖೆಯಿಂದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸೂಕ್ತ ಬಂದೋಬಸ್ತ್​ ಹಾಗೂ ಸಂಚಾರ ವ್ಯವಸ್ಥೆಯ ಬಗ್ಗೆ ಜಾಗೃತರಾಗುವಂತೆ ಹೇಳಲಾಗಿದೆ. ಇತ್ತ ಕಾಂಗ್ರೆಸ್​ ಪಾಳಯದಲ್ಲೂ ಸರ್ಕಾರ ರಚನೆಯ ಚಟುವಟಿಕೆ ಗರಿಗೆದರಿದೆ. ಇಂದೇ ಶಾಸಕಾಂಗ ಸಭೆ ನಡೆಯುವ ಸಾಧ್ಯತೆ ಇದೆ. ಮುಂದಿನ ಕಾರ್ಯಕ್ರಮಗಳ ಬಗ್ಗೆ ಕೈ ನಾಯಕರು ಚರ್ಚಿಸುವ ಸಾಧ್ಯತೆ ಇದೆ.

    ಪ್ರಮಾಣವಚನ ಕಾರ್ಯಕ್ರಮಕ್ಕೆ ಯಾರೆಲ್ಲ ಬರಲಿದ್ದಾರೆ?

    ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿ, ಎಂ.ಕೆ. ಸ್ಟಾಲಿನ್, ನಿತೀಶ್ ಕುಮಾರ್, ಲಾಲು ಪ್ರಸಾದ್​ ಯಾದವ್, ತೇಜಸ್ವಿ ಯಾದವ್, ಶರತ್ ಪವಾರ್, ಉದ್ಧವ್ ಠಾಕ್ರೆ, ಭೂಪೇಶ್ ಭಾಘೇಲ್ ಅವರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆ ಇದೆ.

    ಚುನಾವಣಾ ಫಲಿತಾಂಶದ ಸದ್ಯದ ಟ್ರೆಂಡ್​ ಪ್ರಕಾರ ಕಾಂಗ್ರೆಸ್​ 131 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ 66 ಮತ್ತು ಜೆಡಿಎಸ್​ 21 ಹಾಗೂ ಇತರೆ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್​ ಸ್ಪಷ್ಟಬಹುಮತ ಸಾಧಿಸಿದ್ದು, ಸರ್ಕಾರ ರಚನೆ ಮಾಡುವುದು ಬಹುತೇಕ ಫಿಕ್ಸ್​ ಆಗಿದೆ.

    2018ರ ಫಲಿತಾಂಶ ಏನಿತ್ತು?

    2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್​ 80 ಮತ್ತು ಜೆಡಿಎಸ್​ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.

    ದಾಯಾದಿಗಳ ಕಲಹ; ಸೊರಬದಲ್ಲಿ ಮಧು ಬಂಗಾರಪ್ಪಗೆ ಗೆಲುವು

    ಕನಕಪುರದಲ್ಲಿ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಡಿಕೆಶಿ ಗೆಲುವು; ಆರ್​. ಅಶೋಕ್​ಗೆ ಮುಖಭಂಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts