More

    ಕರ್ನಾಟಕ ಚುನಾವಣಾ ಫಲಿತಾಂಶ: ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಎಚ್​ಡಿಕೆ ಹಿನ್ನಡೆ, ಸಿಪಿವೈಗೆ ಮುನ್ನಡೆ

    ರಾಮನಗರ: ಚನ್ನಪಟ್ಟಣ ಕ್ಷೇತ್ರ ಜಿದ್ದಾಜಿದ್ದಿನ ಕ್ಷೇತ್ರವಾಗಿದೆ. ಮಾಜಿ ಸಿಎಂ ಎಚ್​ ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿಪಿ ಯೋಗೇಶ್ವರ್​ ಕಣದಲ್ಲಿದ್ದು, ಪ್ರಸ್ತುತ ನಡೆಯುತ್ತಿರುವ ಮತ ಎಣಿಕೆಯಲ್ಲಿ ಹಾವು ಏಣಿ ಆಟ ಶುರುವಾಗಿದೆ.

    ಅಂಚೆ ಮತಗಳಲ್ಲಿ ಮಾಜಿ ಸಿಎಂ ಎಚ್​ಡಿಕೆ ಮುನ್ನಡೆ ಕಾಯ್ದುಕೊಂಡಿದ್ದರು. ಇದೀಗ ಮತಯಂತ್ರದ ಮತ ಎಣಿಕೆ ಆರಂಭವಾಗಿದ್ದು, ಎಚ್​ಡಿಕೆಯನ್ನು ಹಿಂದಿಕ್ಕಿ ಸಿ.ಪಿ. ಯೋಗೇಶ್ವರ್​ ಮುನ್ನಡೆ ಕಾಯ್ದುಕೊಂಡಿದ್ದಾರೆ.

    ರಾಮನಗರ ಕ್ಷೇತ್ರದಲ್ಲಿ ಎಚ್​ಡಿಕೆ ಅವರ ಪುತ್ರ ನಿಖಿಲ್​ ಕುಮಾರಸ್ವಾಮಿ ಮುನ್ನಡೆಯನ್ನು ಸಾಧಿಸಿದ್ದಾರೆ.

    ಚುನಾವಣಾ ಫಲಿತಾಂಶದ ಸದ್ಯದ ಟ್ರೆಂಡ್​ ಪ್ರಕಾರ ಬಿಜೆಪಿ 74 ಸ್ಥಾನಗಳಲ್ಲಿ ಮುಂದಿದ್ದರೆ, ಕಾಂಗ್ರೆಸ್ 104 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಉಳಿದಂತೆ ಜೆಡಿಎಸ್​ 26 ಮತ್ತು ಇತರೆ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

    ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್​ ಮತ್ತು ಜೆಡಿಎಸ್​ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.

    2018ರ ಫಲಿತಾಂಶ ಏನಿತ್ತು?

    2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್​ 80 ಮತ್ತು ಜೆಡಿಎಸ್​ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.

    ಕರ್ನಾಟಕ ಚುನಾವಣಾ ಫಲಿತಾಂಶ: ರಾಮನಗರ ಜಿಲ್ಲೆಯ ಅಂಚೆಮತದಲ್ಲಿ ಯಾರು ಯಾರಿಗೆ ಮುನ್ನಡೆ?

    ಕರ್ನಾಟಕ ಚುನಾವಣಾ ಫಲಿತಾಂಶ: ಹಾವೇರಿ ಜಿಲ್ಲೆಯ ಅಂಚೆ ಮತದಾನದಲ್ಲಿ ಯಾರು ಯಾರಿಗೆ ಮುನ್ನಡೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts