More

    ಇಂದು ಸಂಜೆಯೇ ಸಿಎಂ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ಸಾಧ್ಯತೆ

    ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಸ್ಪಷ್ಟ ಬಹುಮತದತ್ತ ದಾಪುಗಾಲು ಇಡುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆಯೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡುವ ಸಾಧ್ಯತೆ ಇದೆ.

    ಇಂದು ಸಂಜೆ ಶಿಗ್ಗಾವಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಬಸವರಾಜ ಬೊಮ್ಮಾಯಿ, ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಚುನಾವಣಾ ಫಲಿತಾಂಶದ ಸದ್ಯದ ಟ್ರೆಂಡ್​ ಪ್ರಕಾರ ಕಾಂಗ್ರೆಸ್​ 134 ಕ್ಷೇತ್ರಗಳಲ್ಲಿ ಮುಂದಿದ್ದರೆ, ಬಿಜೆಪಿ 65 ಮತ್ತು ಜೆಡಿಎಸ್​ 21 ಹಾಗೂ ಇತರೆ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್​ ಸ್ಪಷ್ಟಬಹುಮತ ಸಾಧಿಸಿದ್ದು, ಸರ್ಕಾರ ರಚನೆ ಮಾಡುವುದು ಬಹುತೇಕ ಫಿಕ್ಸ್​ ಆಗಿದೆ.

    2018ರ ಫಲಿತಾಂಶ ಏನಿತ್ತು?

    2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್​ 80 ಮತ್ತು ಜೆಡಿಎಸ್​ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.

    ಜೆಡಿಎಸ್​ ಭದ್ರಕೋಟೆ ರಾಮನಗರ ಛಿದ್ರ: 4 ಕ್ಷೇತ್ರದಲ್ಲಿ 3ರಲ್ಲಿ ಕಾಂಗ್ರೆಸ್​ ಗೆಲುವು, ನಿಖಿಲ್​ಗೆ ಮುಖಭಂಗ

    ಪೂರ್ಣ ಬಹುಮತ ಹಿನ್ನೆಲೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್​ ಭಾರೀ ಸಿದ್ಧತೆ

    ಚುನಾವಣಾ ಫಲಿತಾಂಶ: ಜನಾದೇಶ ಸ್ವಾಗತಿಸಿದ ಎಚ್.ಡಿ.ಕುಮಾರಸ್ವಾಮಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts