

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ವಿಧಾನಸಭಾ ಕ್ಷೇತ್ರ ಶಿಗ್ಗಾವಿಯ ಸರಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಕುಟುಂಬ ಸಮೇತರಾಗಿ ಮತದಾನ ಪ್ರಕ್ರಿಯೆಲ್ಲಿ ಪಾಲ್ಗೊಂಡಿದ್ದಾರೆ.
ಸಿಎಂ ಬೊಮ್ಮಾಯಿ ಮತದಾನ ಮಾಡಲು ತೆರಳುವ ಮುನ್ನ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಆಂಜನೇಯನ ದೇವಸ್ಥಾನಕ್ಜೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಪುತ್ರ ಭರತ್ ಬೊಮ್ಮಾಯಿ ಹಾಗೂ ಪುತ್ರಿ ಅದಿತಿ ಬೊಮ್ಮಾಯಿ ಪಾಲ್ಗೊಂಡಿದ್ದರು.