ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕನಕಪುರ ಕ್ಷೇತ್ರದಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಡಿಕೆಶಿ ವಿರುದ್ಧ ತೊಡೆತಟ್ಟಿದ್ದ ಆರ್. ಅಶೋಕ್ಗೆ ತೀವ್ರ ಮುಖಭಂಗ ಉಂಟಾಗಿದೆ.
ಸುಮಾರು 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಡಿ.ಕೆ. ಶಿವಕುಮಾರ್ ಅವರು ಆರ್. ಅಶೋಕ್ ವಿರುದ್ಧ ಗೆಲುವು ದಾಖಲಿಸಿದ್ದಾರೆ. ಅಧಿಕೃತ ಘೊಷಣೆಯೊಂದೇ ಬಾಕಿ ಇದೆ.
ಚುನಾವಣಾ ಫಲಿತಾಂಶದ ಸದ್ಯದ ಟ್ರೆಂಡ್ ಪ್ರಕಾರ ಕಾಂಗ್ರೆಸ್ 131 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ 65 ಮತ್ತು ಜೆಡಿಎಸ್ 21 ಹಾಗೂ ಇತರೆ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸ್ಪಷ್ಟಬಹುಮತದತ್ತ ಕಾಂಗ್ರೆಸ್ ದಾಪುಗಾಲು ಇಟ್ಟಿದ್ದು, ಸರ್ಕಾರ ರಚನೆ ಮಾಡುವುದು ಬಹುತೇಕ ಫಿಕ್ಸ್ ಆಗಿದೆ.
2018ರ ಫಲಿತಾಂಶ ಏನಿತ್ತು?
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.
ಮತಎಣಿಕೆ ನಡುವೆಯೇ ಆಪರೇಷನ್ ಹಸ್ತ: ಮಾಲೂರು ಪಕ್ಷೇತರ ಅಭ್ಯರ್ಥಿಗೆ ಕಾಂಗ್ರೆಸ್ ಗಾಳ
ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್. ಟಿ ಶ್ರೀನಿವಾಸ್ ಗೆಲುವು
ಹಾಸನದಲ್ಲಿ ಪ್ರೀತಮ್ ಗೌಡಗೆ ಸೋಲಿನ ರುಚಿ! ಭದ್ರಕೋಟೆಯನ್ನು ವಾಪಸ್ ಪಡೆದ ಜೆಡಿಎಸ್…