More

    ಮತ ಚಲಾಯಿಸಿದ ಪದ್ಮಶ್ರೀ ಮಂಜಮ್ಮ ಜೋಗತಿ

    ವಿಜಯನಗರ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಂಜಮ್ಮ ಜೋಗತಿ ಅವರು ಮತ ಚಲಾಯಿಸಿದ್ದಾರೆ. ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ ಮಾಡಿದ್ದಾರೆ. ಮಂಜಮ್ಮ ಜೋಗತಿ ಅವರು ಮತದಾನ ಜಾಗೃತಿಯ ಸ್ಟಾರ್ ಕ್ಯಾಂಪೇನರ್ ಆಗಿದ್ದಾರೆ.

    ಮಕ್ಕಳೊಂದಿಗೆ ತೆರಳಿ ಮತ ಚಲಾಯಿಸಿದ ಸಿಎಂ ಬೊಮ್ಮಾಯಿ

    ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ವಿಧಾನಸಭಾ ಕ್ಷೇತ್ರ ಶಿಗ್ಗಾವಿಯ ಸರಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಕುಟುಂಬ ಸಮೇತರಾಗಿ ಮತದಾನ ಪ್ರಕ್ರಿಯೆಲ್ಲಿ ಪಾಲ್ಗೊಂಡಿದ್ದಾರೆ.

    ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

    ಉಡುಪಿ: ನಟ ರಕ್ಷಿತ್ ಶೆಟ್ಟಿ ಬೆಂಗಳೂರಿನಿಂದ ಬಂದು ಉಡುಪಿ ಜಿಲ್ಲೆಯಲ್ಲಿ ಮತದಾನ ಮಾಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮತದಾನ ಮಾಡುವುದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ ಒಲವಿದೆ. ಆದರೆ ಪ್ರಚಾರಕ್ಕೆ ಹೋಗುವುದಿಲ್ಲ. ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.

    ಮೇ 13ಕ್ಕೆ ಫಲಿತಾಂಶ

    ಕರ್ನಾಟಕ ವಿಧಾನಸಭೆಯು ಒಟ್ಟು 224 ಸದಸ್ಯ ಬಲವನ್ನು ಹೊಂದಿದ್ದು, ಸರ್ಕಾರ ರಚನೆ ಮಾಡಲು ಯಾವುದೇ ಪಕ್ಷಕ್ಕೆ 113 ಸದಸ್ಯರ ಬಲವುಳ್ಳ ಸ್ಪಷ್ಟ ಬಹುಮತ ಬೇಕಾಗಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದ್ದು, ಯಾರು ಕರ್ನಾಟಕದ ಮುಂದಿನ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts